ಬಿಡುವಿನ ವೇಳೆಯಲ್ಲಿ ಮೊಬೈಲ್ ಬಿಟ್ಟು ಪುಸ್ತಕ ಓದಿ ; ನರೇಂದ್ರಕುಮಾರ್

Written by malnadtimes.com

Published on:

ಹೊಸನಗರ ; ವರ್ಷದಲ್ಲಿ 10 ತಿಂಗಳು ಶಾಲೆಯ ಪುಸ್ತಕಗಳನ್ನು ಓದಿ ನಂತರ ಒಂದು ಒಂದೆರಡು ತಿಂಗಳು ಶಾಲೆ ರಜೆ ಸಿಕ್ಕಿದ ನಂತರ ಮಕ್ಕಳು ಬೇಸಿಗೆ ಶಿಬಿರಗಳಿಗೆ ಹೋಗಿ ಸ್ವಲ್ಪ ದೊಡ್ಡವರು ಕತೆ-ಪುಸ್ತಕ ಸಾಮಾಜಿಕ ಆರ್ಥಿಕ ಹಾಗೂ ಸಣ್ಣ-ಸಣ್ಣ ಕತೆಗಳಿರುವ ಪುಸ್ತಕಗಳನ್ನು ಓದಿ ನಿಮ್ಮ ವೃದ್ಧಿಯನ್ನು ಹೆಚ್ಚಿಸಿಕೊಳ್ಳಿ ಯಾವುದೇ ಕಾರಣಕ್ಕೂ ಮೊಬೈಲ್ ಕಡೆಗೆ ಹೆಚ್ಚಿನ ಗಮನ ಹರಿಸಬೇಡಿ ಎಂದು ಹೊಸನಗರ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹೊಸನಗರ ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತಿ ಹಾಗೂ ಗ್ರಂಥಾಲಯ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಚೆಲುವು ಬೇಸಿಗೆ ಸಡಗರ ಶಿಬಿರದ ಸ್ವರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರತಿಭೆಗಳನ್ನು ಗುರುತಿಸುವ ಕಾರ್ಯವನ್ನು ತಾಲ್ಲೂಕು ಪಂಚಾಯತಿಗೆ ಈಗಾಗಲೇ ನೀಡಲಾಗಿದ್ದು ಅದರಂತೆ ಮೇ ತಿಂಗಳಲ್ಲಿ ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಈಗಾಗಲೆ ಮುಗಿದಿದೆ. ಹಳ್ಳಿ ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ಗುರಿ ಈ ಕಾರ್ಯಕ್ರಮದ ಉದ್ಧೇಶವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಹೊಸನಗರ ತಾಲ್ಲೂಕಿನ 30 ಗ್ರಾಮ ಪಂಚಾಯತಿ ವ್ಯಾಪ್ತಿಯ ಮಕ್ಕಳು ಉತ್ಸಾಹದಿಮದ ಭಾಗವಹಿಸಿದ್ದು ಚೆಸ್, ಕೇರಂ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮವನ್ನು ಪಟ್ಟಣ ಪಂಚಾಯತಿ ಸದಸ್ಯ ಅಶ್ವಿನಿಕುಮಾರ್‌ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಎಲ್ಲ ಗ್ರಾಮ ಪಂಚಾಯತಿಯ ಗ್ರಂಥಪಾಲಕರು, ತಾಲ್ಲೂಕು ಪಂಚಾಯತಿ ವ್ಯವಸ್ಥಾಪಕರಾದ ಶಿವಕುಮಾರ್ ಹಾಗೂ ಎಲ್ಲ ಸಿಬ್ಬಂದಿಗಳು, ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕರುಗಳು ಇನ್ನೂ ಮುಂತಾದವರು ಭಾಗವಹಿಸಿದರು.

Leave a Comment