ರಿಪ್ಪನ್‌ಪೇಟೆ ; ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಇಲ್ಲಿನ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಈ ಘಟನೆಯಲ್ಲಿ ಶಾಲೆಯ ಕಾಂಪೌಂಡ್, ವಿದ್ಯುತ್ ಕಂಬಗಳು ಹಾಗೂ ಮರಗಳು, ತೆಂಗಿನಮರ ಧರಾಶಾಹಿಯಾಗಿದ್ದು, ಅನೇಕ ಮನೆಗಳ ಹೆಂಚುಗಳು, ಶೀಟುಗಳು ಗಾಳಿಯ ಆರ್ಭಟಕ್ಕೆ ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ.

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮರ, ವಿದ್ಯುತ್ ಕಂಬಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದರಿಂದ ಕೆಲಕಾಲ ಹೊಸನಗರ – ರಿಪ್ಪನ್‌ಪೇಟೆ ಸಂಚಾರ ಅಸ್ತವ್ಯಸ್ತವಾಗಿತ್ತು.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು, ಗ್ರಾ.ಪಂ ಸದಸ್ಯೆ ಮಂಜುಳಾ ಕೆ ರಾವ್, ಪಿಡಿಒ ನಾಗರಾಜ್ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



