ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ ; ಜಿ.ಎಸ್.ಸಂಗ್ರೇಶಿ

Written by malnadtimes.com

Updated on:

ಶಿವಮೊಗ್ಗ ; ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್.ಸಂಗ್ರೇಶಿ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ಮಹಾನಗರಪಾಲಿಕೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿವಮೊಗ್ಗ ಪಾಲಿಕೆಯಲ್ಲಿ ನಿಕಾಯ (ಬಾಡಿ) ಇಲ್ಲದೇ ಒಂದೂವರೆ ವರ್ಷ ಆಗಿದೆ. ಚುನಾವಣೆ ನಡೆಸಲು ಮೀಸಲಾತಿ ಪಟ್ಟಿ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ವ್ಯವಹಾರ ಮಾಡಲಾಗಿದೆ. ಸಂಬಂಧಿಸಿದ ಮಂತ್ರಿಗಳು, ಮುಖ್ಯಮಂತ್ರಿಗಳಿಗೆ ಸಹ ಕೋರಲಾಗಿದೆ. ಸರ್ಕಾರದಿಂದ ಈ ಕುರಿತು ಸ್ಪಂದನೆ ಬಾರದ ಕಾರಣ ಸುಪ್ರೀಂಕೋರ್ಟ್ ಆದೇಶದನ್ವಯ ಉಚ್ಛ ನ್ಯಾಯಾಲಯಕ್ಕೆ ರಿಟ್ ಸಲ್ಲಿಸಿ ಪಾಲಿಕೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಜೂನ್ ವೇಳೆಗೆ ಉಚ್ಛ ನ್ಯಾಯಾಲಯದಲ್ಲಿ ಈ ರಿಟ್‌ಗೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ಚುನಾವಣೆ ಕುರಿತು ಸರ್ಕಾರದಿಂದ ಸ್ಪಂದನೆ ಬಂದ ತಕ್ಷಣ ದಿನಾಂಕ ನಿಗದಿಗೊಳಿಸಲಾಗುವುದು.

ಕಳೆದ ಆಗಸ್ಟ್ ಮಾಹೆಯಲ್ಲಿಯೇ ಚುನಾವಣೆಗೆ ಸಂಬಂಧಿಸಿದಂತೆ ಮತದಾತರರ ಪಟ್ಟಿ ತಯಾರಿಸುವ ವೇಳಾಪಟ್ಟಿ ಹೊರಡಿಸಲಾಗಿತ್ತು. ಕಾರಣಾಂತರದಿಂದ ಅದರ ಪ್ರಕಾರ ಅಂತಿಮ ಮತದಾರರ ಪಟ್ಟಿ ಸಿದ್ದವಾಗಿಲ್ಲ. ಕರಡು ಮತದಾರರ ಪಟ್ಟಿ ಮಾತ್ರ ಸಿದ್ದವಾಗಿದೆ.

ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ವಿಶೇಷವಾಗಿ ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಸಿದ್ದ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ ಅವರು ನ್ಯಾಯ ಮತ್ತು ಮುಕ್ತ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಸಹಕರಿಸಬೇಕೆಂದು ತಿಳಿಸಿದರು.

ಶಿವಮೊಗ್ಗ

ಮಹಾನಗರಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್ ಮಾತನಾಡಿ, ಆಗಸ್ಟ್ ಮಾಹೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ವೇಳಾಪಟ್ಟಿ ಹೊರಡಿಸಲಾಗಿದ್ದು, ದಿನಾಂಕ: 19-08-2024 ರಿಂದ 24-08-2024 ರವರೆಗೆ ವಾರ್ಡ್‌ಗಳ ವಿಂಗಡಣೆ ಅಧಿಸೂಚನೆಯಂತೆ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಮತದಾರರನ್ನು ಗುರುತಿಸುವಿಕೆ. 25-08-2024 ರಿಂದ 31-08-2024 ರವರಗೆ ಮತದಾರರ ಪಟ್ಟಿಯಲ್ಲಿ ಮತದಾರರನ್ನು ಗುರುತಿಸಿದ ನಂತರ ಫ್ರಂ ಟು ಮ್ಯಾಟ್ರಿಕ್ಸ್ ತಯಾರಿಸಿ ಮುದ್ರಕರಿಗೆ ನೀಡುವುದು. 01-09-2024 ರಿಂದ 04-9-2024 ರವರೆಗೆ ಫ್ರಂ ಟು ಮ್ಯಾಟ್ರಿಕ್ಸ್ ರಂತೆ ಪ್ರಥಮ ಚೆಕ್ ಲಿಸ್ಟ್ ಮುದ್ರಣ. 05-09-2024 ರಿಂದ 10-09-2024 ರವರೆಗೆ ಮುದ್ರಕರಿಂದ ಪ್ರಥಮ ಚೆಕ್‌ಲಿಸ್ಟ್ ಪಡೆದುಕೊಂಡು ವಾರ್ಡ್ವಾರು ಮತ್ತೊಮ್ಮೆ ಪರಿಶೀಲಿಸಿ ಆಗಬೇಕಾಗಿರುವ ಬದಲಾವಣೆಗಳನ್ನು ಮತದಾರರ ಪಟ್ಟಿಯಲ್ಲಿ ಅಳವಡಿಸುವುದು. 17-09-2024 ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸುವುದು. 24-09-2024 ಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನ. 30-09-2024 ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕೊನೆಯ ದಿನ. 06-10-2024 ಕ್ಕೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆಗಳನ್ನು ಮಾಡಿಸಿ ಅಂತಿಮ ಚೆಕ್‌ಲಿಸ್ಟ್ ಪಡೆದುಕೊಂಡು ವಾರ್ಡ್ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲಿಸಲು ಅಂತಿಮ ದಿನಾಂಕ ದಿ: 09-10-2024 ಅಂತಿಮ ಮತದಾರರ ಪಟ್ಟಿ ಪ್ರಕಟಣೆ.

ಮೇಲ್ಕಂಡ ವೇಳಾಪಟ್ಟಿಯಂತೆ ಅಂತಿಮ ಮತದಾರರ ಪಟ್ಟಿಯನ್ನು ಕಾರಣಾಂತರಗಳಿಂದ ಪ್ರಕಟಿಸಲಾಗಿಲ್ಲ.ಪಾಲಿಕೆ ವ್ಯಾಪ್ತಿಯಲ್ಲಿ 35 ವಾರ್ಡ್‌ಗಳಿದ್ದು 2011 ರ ಜನಗಣತಿ ಪ್ರಕಾರ 3.22 ಲಕ್ಷ ಜನಸಂಖ್ಯೆ ಇದೆ. ಒಟ್ಟು 288 ಮತಗಟ್ಟೆಗಳಿವೆ. 2024-2025 ರಂತೆ 133479 ಪುರುಷ, 141480 ಮಹಿಳೆ, 17 ಇತರೆ ಸೇರಿದಂತೆ 274976 ಮತದಾರರು ಇದ್ದಾರೆ. ಇದರಲ್ಲಿ 85 ವರ್ಷ ಮೀರಿದ 2583 ಹಾಗೂ ವಿಕಲಚೇತನ 1465 ಮತದಾರರು ಇದ್ದಾರೆ. ಕರಡು ಮತದಾರರ ಪಟ್ಟಿ ಸಿದ್ದವಾಗಿದೆ. ಚುನಾವಣೆ ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಪಾಲಿಕೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Read More

SSLC ಮರು ಮೌಲ್ಯಮಾಪನ ; ರಾಜ್ಯಕ್ಕೆ 3ನೇ ರ‍್ಯಾಂಕ್ ಪಡೆದ ಹೊಸನಗರದ ವೈಷ್ಣವಿ

ಪೊಲೀಸ್ ಇನ್ಸ್‌ಪೆಕ್ಟರ್ ನಂಜಪ್ಪ ನಿಧನ !

ಬಿಡುವಿನ ವೇಳೆಯಲ್ಲಿ ಮೊಬೈಲ್ ಬಿಟ್ಟು ಪುಸ್ತಕ ಓದಿ ; ನರೇಂದ್ರಕುಮಾರ್

Leave a Comment