ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು ಪ್ರವಾಸಿ ಕಾರು ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ.
ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿ-ಮಳೆಗೆ ಮತ್ತೊಂದು ಕಾರು ಪಲ್ಟಿಯಾಗಿ ಹೇಮಾವತಿ ನದಿಯ ಉಪನದಿಯ ಹಳ್ಳಕ್ಕೆ ಬಿದ್ದಿದೆ.
ಭಾರೀ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಸಮಾಜ ಸೇವಕ ಆರೀಫ್ ಅವರಿಂದ ಕಾರಿನಲ್ಲಿದ್ದವರನ್ನು ರಕ್ಷಿಸಲಾಗಿದೆ.

ಸೊಂಟಕ್ಕೆ ಹಗ್ಗ ಕಟ್ಟಿ ಹಳ್ಳಕ್ಕೆ ಇಳಿದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದ್ದು, ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಣಕಲ್‌ನಿಂದ ಕೊಟ್ಟಿಗೆಹಾರ ಮಾರ್ಗದಲ್ಲಿ ಒಟ್ಟು ಮೂರು ಕಾರುಗಳು ಅಪಘಾತಕ್ಕೆ ಈಡಾಗಿವೆ. ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮತ್ತೊಂದೆಡೆ ಕಸ್ಕೇಬೈಲ್ ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದರಿಂದ ಬೇಲೂರು – ಚೀಕನಹಳ್ಳಿ – ಮೂಡಿಗೆರೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.

ಕಳಸ, ಕೊಪ್ಪ, ಬಾಳೆಹೊನ್ನೂರು, ಆಲ್ದೂರು, ಶೃಂಗೇರಿ, ಎನ್.ಆರ್.ಪುರ, ಚಿಕ್ಕಮಗಳೂರು ನಗರ ಸೇರಿ ಎಲ್ಲೆಡೆ ಮಳೆ ಆರ್ಭಟ ಮುಂದುವರಿದಿದೆ. ಹಲವು ಮನೆಗಳ ಮೇಲೆ ಮರಗಳು ಉರುಳಿವೆ. ವಿದ್ಯುತ್ ಕಂಬಗಳೂ ನೆಲಕಚ್ಚಿವೆ. ಬಾಬಾಬುಡನ್‌ಗಿರಿ ರಸ್ತೆಯ ಕವಿಕಲ್ ಗಂಡಿ ಬಳಿ ಮಣ್ಣು ಜರಿದಿದ್ದು, ಆತಂಕ ಮನೆ ಮಾಡಿದೆ. ಹೆಚ್ಚು ಕುಸಿಯದಂತೆ ಸುರಕ್ಷತಾ ಕ್ರಮಗಳನ್ನು ಲೋಕೋಪಯೋಗಿ ಇಲಾಖೆ ಸಿಬ್ಬಂದಿ ಕೈಗೊಂಡಿದ್ದು, ಮರಳು ಮೂಟೆಗಳನ್ನು ಜೋಡಿಸಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraMay 25, 2025ಎಸ್ಎಸ್ಎಲ್ಸಿ ಮರು ಮೌಲ್ಯಮಾಪನ : ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ವೈಷ್ಣವಿಗೆ ಸನ್ಮಾನ
RipponpeteMay 25, 2025ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ; SSLC ಮೌಲ್ಯಮಾಪಕರ ವಿರುದ್ಧ ಕ್ರಮ ಜರುಗಿಸಲು ಆಗ್ರಹ
Crime NewsMay 25, 2025ಮದುವೆಯಾಗುವಂತೆ ಅಪ್ರಾಪ್ತೆಗೆ ಒತ್ತಾಯಿಸಿ ಜೀವಬೆದರಿಕೆ ; ಯುವಕನ ಬಂಧನ !
Chikmagaluru NewsMay 25, 2025ಮಹಾಮಳೆಗೆ ಕಾಫಿನಾಡಿನಲ್ಲಿ ಮೂರನೇ ಬಲಿ ; ಆಟೋ ಮೇಲೆ ಮರ ಬಿದ್ದು ಚಾಲಕ ಸಾವು !