ಮದುವೆಯಾಗುವಂತೆ ಅಪ್ರಾಪ್ತೆಗೆ ಒತ್ತಾಯಿಸಿ ಜೀವಬೆದರಿಕೆ ; ಯುವಕನ ಬಂಧನ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಅಪ್ರಾಪ್ತೆಯನ್ನು ಮದುವೆಯಾಗುವಂತೆ ಪೀಡಿಸಿ ಜೀವಬೆದರಿಕೆ ಹಾಕಿ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮದುವೆಯಾಗುವಂತೆ ಬಾಲಕಿಯನ್ನು ಒತ್ತಾಯಿಸಿ ಮದುವೆಯಾಗಲು ಒಪ್ಪದಿದ್ದರೆ ನಾನು ವಿಷ ಸೇವಿಸುವುದಾಗಿ ಬೆದರಿಕೆ ಒಡ್ಡಿರುವ ಆರೋಪದ ಮೇರೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ 23 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ.

ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿಯನ್ನು ತೀರ್ಥಹಳ್ಳಿ ಡಿ.ವೈ.ಎಸ್.ಪಿ. ಅರವಿಂದ್ ಕಲಗುಜ್ಜಿ, ಪಿಎಸ್‌ಐ ಪ್ರವೀಣ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Comment