ಈ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ ಏರಿಕೆ: ಮಹತ್ವದ ನಿರ್ಣಯ ಮಾಡಿದ ಕೇಂದ್ರ ಸಂಪುಟ!

Written by Koushik G K

Published on:

MSP crops list :ಮುಂಗಾರು ಬಿತ್ತನೆ ಹಂಗಾಮಿಗೆ ಸಂಬಂಧಿಸಿದ ಹಾಗೆ ಒಟ್ಟು ಹದಿನಾಲ್ಕು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಳ ಮಾಡುವುದಕ್ಕೆ ಅನುಮೋದನೆ ನೀಡುವ ಮೂಲಕ ಕೇಂದ್ರ ಸಚಿವ ಸಂಪುಟ ಬುಧವಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.

WhatsApp Group Join Now
Telegram Group Join Now
Instagram Group Join Now

ಬಿಹಾರ ವಿಧಾನಸಭೆಯ ಚುನಾವಣೆ ಹತ್ತಿರುವಾಗುತ್ತಿರುವ ಸಮಯದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದಂತಹ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಎಂಎಸ್‌ಪಿ ಕುರಿತ ಕೃಷಿ ಸಚಿವಾಲಯದ ಪ್ರಸ್ತಾವವನ್ನು ಅನುಮೋದಿಸಲಾಗಿದೆ.

ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಮಾತನಾಡುತ್ತಾ, ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ ನಿಗಧಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆಯಾಗುತ್ತಿದೆ. ಈ ಬಾರಿ ಮುಂಗಾರು ಬಹಳ ಬೇಗ ಪ್ರವೇಶ ಮಾಡಿದೆ. ದೇಶದಲ್ಲಿ ಒಟ್ಟು ವಾರ್ಷಿಕ ಆಹಾರ ಧಾನ್ಯ ಉತ್ಪಾದನೆಯಲ್ಲಿ ಶೇ 50ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಕೊಡುಗೆಯನ್ನು ನೀಡುತ್ತಿರುವ ಬೆಳೆಗಳಿಗೆ ಉತ್ತೇಜನವನ್ನ ನೀಡಲು ಇಂತಹುದೊಂದು ಕ್ರಮವನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.‌

ತಮ್ಮ ಬೆಳೆಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ರೈತರಿಗೆ ಅನುಕೂಲ ಮಾಡಿಕೊಡಲು ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದರಲ್ಲಿ ಹುಚ್ಚೆಳ್ಳು (ಪ್ರತಿ ಕ್ವಿಂಟಲ್‌ಗೆ ₹820), ರಾಗಿ (ಪ್ರತಿ ಕ್ವಿಂಟಲ್‌ಗೆ ₹596), ಹತ್ತಿ (ಪ್ರತಿ ಕ್ವಿಂಟಲ್‌ಗೆ ₹589) ಮತ್ತು ಎಳ್ಳು (ಪ್ರತಿ ಕ್ವಿಂಟಲ್‌ಗೆ ₹579) ಅತ್ಯಧಿಕ ಬೆಂಬಲ ಬೆಲೆಯನ್ನು ಶಿಫಾರಸು ಮಾಡಲಾಗಿದೆ.‌

ಭತ್ತಕ್ಕೆ ನೀಡಲಾಗುವಂತಹ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪ್ರತಿ ಕ್ವಿಂಟಲ್‌ ಗೆ ಶೇ 3 ರಷ್ಟು (₹69) ಹೆಚ್ಚು ಮಾಡಲಾಗಿದೆ. ದ್ವಿದಳ ಧಾನ್ಯಗಳು ಹಾಗೂ ಎಣ್ಣೆ ಬೀಜಗಳ ಎಂಎಸ್‌ಪಿಯು ಶೇ 9ರಷ್ಟು ಹೆಚ್ಚಾಗಿದೆ. ದೇಶೀಯ ಉತ್ಪಾದನೆಯನ್ನು ಉತ್ತೇಜಿಸುವುದಕ್ಕಾಗಿ ಹಾಗೂ ಆಮದು ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಬಾರಿ ಬೆಂಬಲ ಬೆಲೆಗಳಲ್ಲಿ ಮಹತ್ವದ ಹೆಚ್ಚಳವನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.

14 ಪ್ರಮುಖ ಬೆಳೆಗಳಿಗೆ ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯು ಅದರ ಉತ್ಪಾದನೆಗೆ ತೆರಬೇಕಾಗುವ ವೆಚ್ಚದ ಕನಿಷ್ಠ ಒಂದೂವರೆ ಪಟ್ಟು ಇರಲಿದೆ ಎನ್ನಲಾಗಿದ್ದು, ಈ ಸಂಬಂಧ 2018ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟ ನೀತಿಯನ್ನು ಘೋಷಿಸಿತ್ತು. ಅದರ ಅನುಸಾರ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆಯೆಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.

ಕೊನೆಯ 10-11 ವರ್ಷಗಳಲ್ಲಿ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗ ನೀಡಿರುವ ಶಿಫಾರಸ್ಸಿನ ಆಧಾರದ ಮೇಲೆ ಈ 14 ಬೆಳೆಗಳಿಗೆ ಎಂಎಸ್‌ಪಿಯಲ್ಲಿ ಗಮನಾರ್ಹವಾಗಿ ಹೆಚ್ಚಳ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

Read More

ಎಸ್ಎಸ್ಎಲ್ಸಿ ಪಾಸಾದವರಿಗೆ ಪ್ರತೀ ತಿಂಗಳು 3500 ರೂ ಸ್ಕಾಲರ್ಶಿಪ್ !

ಶಿವಮೊಗ್ಗ- ಮೈಸೂರು ಎಕ್ಸ್ಪ್ರೆಸ್ ರೈಲಿನ ಲೇಟೆಸ್ಟ್ ಅಪ್ಡೇಟ್ !

Leave a Comment