ಈಗಾಗಲೇ ಕೊರೊನಾ ವೈರಸ್ ನ ಪರಿಣಾಮವಾಗಿ ರಾಜ್ಯದಲ್ಲಿ ಮೂರು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಸೋಂಕಿತರ ಪ್ರಕರಣಗಳ ಸಂಖ್ಯೆಯೂ 425ಕ್ಕೆ ಏರಿಕೆಯಾಗಿದೆ. ಈ ಸಾಂಕ್ರಾಮಿಕ ಪರಿಸ್ಥಿತಿಯ ಬಗ್ಗೆ ಆಲೋಚಿಸುವಾಗಲೇ ಮತ್ತೊಂದು ವೈರಸ್ ರಾಜ್ಯದ ನೆಲಕ್ಕೆ ಕಾಲಿಟ್ಟಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಈ ರೋಗವನ್ನು ಪತ್ತೆ ಮಾಡಲಾಗಿದ್ದು, ಹಂದಿಗಳನ್ನು ಇತರೆ ರಾಜ್ಯಗಳಿಂದ ಇಲ್ಲಿಗೆ ಆಮದು ಮಾಡಿಕೊಂಡ ಸಂದರ್ಭದಲ್ಲಿ ಈ ಸೋಂಕು ಹರಡಿರುವ ಸಾಧ್ಯತೆ ವ್ಯಕ್ತವಾಗಿದೆ. ಮೇ 22 ರಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು ಭೋಪಾಲ್ ನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದರು.
ಇಳಕಲ್ ತಾಲ್ಲೂಕಿನಿಂದ ಹಂದಿಗಳನ್ನು ಕೇರಳ, ತಮಿಳುನಾಡು ರಾಜ್ಯಗಳಿಗೆ ಮತ್ತು ರಾಜ್ಯದ ಕೊಡಗು ಜಿಲ್ಲೆಗಳಿಗೆ ಸಾಗಿಸಲಾಗುತ್ತಿದ್ದ ಕಾರಣ ಈಗ ಈ ಜ್ವರವು ಕೇವಲ ಬಾಗಲಕೋಟೆಗೆ ಮಾತ್ರ ಸೀಮಿತವಿಲ್ಲ ಎನ್ನುವ ಶಂಕೆ ಸಹಾ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಹಾಗೂ ಹಲವು ರಾಜ್ಯ ಸರ್ಕಾರಗಳು ಸಹಾ ಈಗಾಗಲೇ ಈ ಸೋಂಕಿನ ಕುರಿತಾಗಿ ಎಚ್ಚರಿಕೆಯನ್ನು ನೀಡಿವೆ.
ಪಶು ಸಂಗೋಪನೆ ಇಲಾಖೆ ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಮೂರು ರ್ಯಾಪಿಡ್ ತಂಡಗಳನ್ನು ರೋಗ ನಿಯಂತ್ರಣ ಕಾರ್ಯಕ್ಕಾಗಿ ನಿಯೋಜನೆ ಮಾಡಿದೆ. ಅಷ್ಟೇ ಅಲ್ಲದೇ ಈ ಸೋಂಕು ಕಾಣಿಸಿಕೊಂಡ ಪ್ರದೇಶವನ್ನು 0-1 ಕಿ.ಮೀ ವ್ಯಾಪ್ತಿಯ ಪೀಡಿತ ವಲಯ ಹಾಗೂ 1-10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಎಚ್ಚರಿಕೆಯ ವಲಯ ಎಂದು ಗುರುತಿಸಲಾಗಿದೆ. ಸೋಂಕು ಕಾಣಿಸಿಕೊಂಡ ಹಂದಿಗಳನ್ನು ತಕ್ಷಣವೇ ನಾಶಪಡಿಸಲಾಗುತ್ತಿದೆ.
Read More
ಗ್ರಾಮೀಣ ಪ್ರದೇಶದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಗುಡ್ ನ್ಯೂಸ್!
ಹೊಸ ಹಣಕಾಸು ನೀತಿಯಿಂದ ನಿವೃತ್ತ ಸರ್ಕಾರಿ ನೌಕರರಿಗೆ ಜೇಬಿಗೆ ಕತ್ತರಿ!
ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ನ್ಯೂಸ್ ! ರದ್ದಾಗಲಿವೆ ಈ ಕಾರ್ಡ್ ಗಳು !
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.