ಹೊಸನಗರ ; ತಾಲ್ಲೂಕಿನ ಮಾಸ್ತಿಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಣಿ ಡ್ಯಾಮ್ ಬಳಿ ಕಾಂತಾರ-1 ಸಿನಿಮಾದ ಚಿತ್ರೀಕರಣ ಸಂದರ್ಭದಲ್ಲಿ ದೋಣಿ ಮಗುಚಿದೆ ಎಂದು ಹಬ್ಬಿರುವ ಸುದ್ದಿ ಸುಳ್ಳು ಎಂದು ಹೊಸನಗರ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಸ್ಪಷ್ಟಪಡಿಸಿದ್ದಾರೆ.

ಅವರು ಭಾನುವಾರ ಬೆಳಗ್ಗೆ ಮಾಸ್ತಿಕಟ್ಟೆ ಬಳಿ ಕಾಂತಾರ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು ಅಲ್ಲಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಮಾತನಾಡಿದರು.

ಶನಿವಾರ ಸಂಜೆಯಿಂದ ಕೆಲವು ಮಾಧ್ಯಮಗಳಲ್ಲಿ ದೋಣಿ ಮಗುಚಿ 30 ಜನರು ನೀರಿನಲ್ಲಿ ಮುಳುಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹಾಗೂ ಸಿನಿಮಾದ ಕ್ಯಾಮೆರಾಗಳು ನೀರಿನಲ್ಲಿ ಮುಳುಗಿದೆ ಎಂಬ ಸುದ್ದಿ ಸುಳ್ಳಾಗಿದ್ದು ಶನಿವಾರ ಸಂಜೆ ಹೊಳೆಯ ಬದಿ ಹಾಕಿರುವ ತೇಲುವ ಅಟ್ಟಣಿಗೆ ಮಗುಚಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.