ಭಾರಿ ಮಳೆ ಹಿನ್ನೆಲೆ ; ಈ 4 ಜಿಲ್ಲೆಯ ಶಾಲಾ-ಕಾಲೇಜ್‌ಗೆ ಸೋಮವಾರ ರಜೆ ಘೋಷಣೆ

Written by Mahesh Hindlemane

Published on:

ಬೆಂಗಳೂರು ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಜಿಲ್ಲೆಗಳ ಶಾಲಾ ಕಾಲೇಜಿಗೆ ಜೂ.16ರ ಸೋಮವಾರ ರಜೆ ಘೋಷಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕೊಡುಗು ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆ, ದಕ್ಷಿಣ ಕನ್ನಡದ ಐದು ತಾಲೂಕು, ಚಿಕ್ಕಮಗಳೂರಿನ 6 ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.

ಕೊಡುಗು ಜಿಲ್ಲೆ ಶಾಲಾ-ಕಾಲೇಜಿಗೆ ರಜೆ :

ಕೊಡುಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಜೂನ್ 16 ರಂದು ಭಾರಿ ಮಳೆ ಮುನ್ಸೂಚನೆ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಜೂನ್ 17ರ ಬೆಳಗ್ಗೆ ವರೆಗೆ ಆರೇಂಜ್ ಅಲರ್ಟ್ ಕಾರಣದಿಂದ ರಜೆ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ :

ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೋಮವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದ 5 ತಾಲೂಕಿನಲ್ಲಿ ರಜೆ :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಹಲವು ತಾಲೂಕುಗಳು ನೀರಿನಲ್ಲಿ ಮುಳುಗಿದೆ. ಹೀಗಾಗಿ ಭಾರಿ ಮಳೆಯಾಗುತ್ತಿರುವ ನಾಳೆ ಜೂ.16 ರಂದು 5 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ಹಾಗೂ ಮೂಡಬಿದಿರೆ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶ ನೀಡಿದ್ದಾರೆ.

ಚಿಕ್ಕಮಗಳೂರಿನ 6 ತಾಲೂಕಿನ ಶಾಲೆಗಳಿಗೆ ರಜೆ :

ಮಲೆನಾಡಿನಲ್ಲೂ ಭಾರಿ ಗಾಳಿ ಮಳೆಯಾಗುತ್ತಿದೆ. ಹೀಗಾಗಿ ಜೂ.16 ರ ಸೋಮವಾರ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ನೀಡಿದ್ದಾರೆ.

Leave a Comment