ಹೊಸನಗರ ; ತಾಲೂಕಿನಾದ್ಯಂತ ಮುಂಗಾರು ಮಳೆ ಬಿರುಗಾಳಿಯೊಂದಿಗೆ ಅಬ್ಬರಿಸುತ್ತಿದ್ದು ಮಳೆಯಿಂದಾಗಿ ತಾಲ್ಲೂಕಿನ ಸೊನಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳಗಿ ನಿವಾಸಿ ವಿಶ್ವನಾಥ್ ಅವರ ಮನೆ ಮತ್ತು ಕೊಟ್ಟಿಗೆ ಗೋಡೆ ಕುಸಿದು ಅಪಾರ ಹಾನಿ ಸಂಭವಿಸಿರುವುದಾಗಿ ವರದಿಯಾಗಿದೆ.

ಭಾನುವಾರ ರಾತ್ರಿ ಸುರಿದು ಮಳೆಯಿಂದ ಈ ಘಟನೆ ಸಂಭವಿಸಿದ್ದು ಮನೆಯಲ್ಲಿದ್ದ ವಿಶ್ವನಾಥ್, ಪತ್ನಿ ಹಾಗೂ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್ ಹಾಗೂ ಗ್ರಾಮ ಆಡಳಿತಾಧಿಕಾರಿ ಸಿದ್ದಪ್ಪ, ಸೊನಲೆ ಗ್ರಾಮ ಪಂಚಾಯತಿ ಪಿಡಿಓ ಕಾವೇರಿ, ಗ್ರಾಮ ಪಂಚಾಯತಿಯ ಸದಸ್ಯ ಸತೀಶ್ ಇನ್ನೂ ಮುಂತಾದವರು ಸ್ಥಳಕ್ಕೆ ಬೇಟಿ ನೀಡಿ ಪರೀಶೀಲಿಸಿದರು.



ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.