ಕಳಸ ; ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ.

ಮರ ಬಿದ್ದ ಪರಿಣಾಮ ಮನೆಯ ಒಂದು ಭಾಗಕ್ಕೆ ಹಾನಿಯಾಗಿದ್ದು ಜೊತೆಗೆ ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶವಾಗಿದೆ.
ಮರ ಬೀಳುವ ಸದ್ದು ಕೇಳುತ್ತಿದ್ದಂತೆ ಮನೆಯಿಂದ ಹೊರ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ ಆದರೆ ಈ ವೇಳೆ ಮರದ ಟೊಂಗೆಯೊಂದು ಪ್ರೇಮಾ ಅವರ ಮೇಲೆ ಬಿದ್ದು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಂಚಾಯಿತಿ ಸದಸ್ಯರಾದ ವಿಶ್ವನಾಥ್, ಗುಲಾಬಿ ಮರ ತೆರವುಗೊಳಿಸಲು ನೆರವಾದರು. ಬಹುತೇಕ ಮನೆ ಜಖಂಗೊಂಡಿದ್ದು, ಮನೆಯಲ್ಲಿದ್ದ ದಿನಬಳಕೆ ವಸ್ತುಗಳು ನಾಶವಾಗಿವೆ. ಪರಿಹಾರ ನೀಡುವಂತೆ ಸಂತ್ರಸ್ತರು ಮನವಿ ಮಾಡಿದ್ದಾರೆ. ಪೊಲೀಸ್, ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.
ಇನ್ನೂ ಭಾರಿ ಮಳೆಯಿಂದಾಗಿ ಕಾಫಿ ತೋಟಗಳಲ್ಲಿ ಮರಗಳು ಬಿದ್ದು ಕಾಫಿ ಗಿಡಗಳಿಗೆ ಹಾನಿ ಆಗಿದೆ. ಅಡಿಕೆ ಮರಗಳೂ ಧರೆಗುರುಳಿವೆ, ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು, ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.