Karnataka Rain : ಕರ್ನಾಟಕದಲ್ಲಿ ಮುಂಗಾರು ಪ್ರಾರಂಭವಾದ ನಂತರ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂಗಾರು ಪೂರ್ವ ಮಳೆಯ ಅಬ್ಬರವೇ ಹೆಚ್ಚಿದ್ದು, ಕಳೆದ ಎರಡು ದಿನಗಳಿಂದ ಮುಂಗಾರು ಮಳೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತುಸು ಮಳೆಯಾಗಿತ್ತು , ಆದರೆ ಈಗ ಕರಾವಳಿ ಹೊರತುಪಡಿಸಿ ಉಳಿದ ಎಲ್ಲಾ ಪ್ರದೇಶಗಳಲ್ಲೂ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 8-10 ದಿನಗಳಲ್ಲಿ ರಾಜ್ಯದಲ್ಲಿ ಅಬ್ಬರವಾಗಿದ್ದ ಮಳೆ ಈಗ ಬ್ರೆಕ್ ನೀಡಿದ್ದಾನೆ. ಜೂನ್ 25 ರವರೆಗೆ ವರುಣ ವಿರಾಮ ಕೊಡಲಿದ್ದು, ಸಾಧಾರಣ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ವಿಜಯನಗರದಲ್ಲಿ ಜೂನ್ 25 ರವರೆಗೆ ಸಾಧಾರಣ ಮಳೆ ಆಗಲಿದೆ.
Read More
ಭಾರತೀಯ ರೈಲ್ವೆ ಇಲಾಖೆಯಿಂದ ಟಿಕೆಟ್ ದರದಲ್ಲಿ 70% ರಿಯಾಯಿತಿ !
ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 23 ರವರೆಗೂ ಭಾರೀ ಮಳೆ
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.