ಈ ಸಮುದಾಯದವರಿಗೆ 2025–26ನೇ ಸಾಲಿನ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Written by Koushik G K

Published on:

ಶಿವಮೊಗ್ಗ, ಜೂನ್ 21: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮವು 2025–26ನೇ ಸಾಲಿನ ಅನೇಕ ಉದ್ದೇಶಿತ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅರ್ಜಿ ಆಹ್ವಾನಿತ ಯೋಜನೆಗಳು:

  • ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
  • ಬ್ಯಾಂಕ್ ಸಹಯೋಗದೊಂದಿಗೆ ಆಹಾರ ವಾಹಿನಿ/ವಾಹಿನಿ ಯೋಜನೆ
  • ವಾಸತಿ ಜಲಶಕ್ತಿ ಯೋಜನೆ
  • ಅರಿವು ಶೈಕ್ಷಣಿಕ ಸಾಲ ಯೋಜನೆ (CET, NEET ಕೌನ್ಸೆಲಿಂಗ್ ನಂತರ ಆರಂಭವಾಗಲಿದೆ)

ಅರ್ಹತಾ ನಿಯಮಗಳು:

  • ಸಾಮಾನ್ಯ ವರ್ಗದ ಆರ್ಯ ವೈಶ್ಯ ಸಮುದಾಯದವರಾಗಿರಬೇಕು.
  • ಅರ್ಜಿದಾರರು ನಮೂನೆ-ಜಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಹೊಂದಿರಬೇಕು.
  • ಅರ್ಜಿದಾರರು ಕರ್ನಾಟಕದ ನಿವಾಸಿಗಳು ಆಗಿರಬೇಕು.
  • ಅವರ ಆಧಾರ್ ಸಂಖ್ಯೆ ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಅಗತ್ಯವಿದೆ.

ಅರ್ಜಿ ಪರಿಶೀಲನೆಯು ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮುಖಾಂತರ ನಡೆಯಲಿದ್ದು, ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ವಿಶೇಷ ಮಾಹಿತಿ: 2019–20ರಿಂದ 2021–22 ರವರೆಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆದು, ಸಕಾಲದಲ್ಲಿ ಸಂಪೂರ್ಣ ಮರುಪಾವತಿ ಮಾಡಿದ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಹೆಚ್ಚಿನ ವಿವರಗಳಿಗೆ: ನಿಗಮದ ಸಹಾಯವಾಣಿ ಅಥವಾ ಅಧಿಕೃತ ವೆಬ್‌ಸೈಟ್‌ಗೆ ಸಂಪರ್ಕಿಸಬಹುದಾಗಿದೆ.ನಿಗಮದ ಸಹಾಯವಾಣಿ ಸಂಖ್ಯೆ 9448451111, ವೆಬ್‌ಸೈಟ್ kacdc.karnataka.gov.in ಇಲ್ಲಿ ಹಾಗೂ ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ 577201

Read More :ಟಿಪ್ ಟಾಪ್ ಬಷೀರ್ ಮನೆ ಮೇಲೆ ED ದಾಳಿ: ಸಾಗರದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ತನಿಖೆ!

Leave a Comment