ರಿಪ್ಪನ್‌ಪೇಟೆ ; ಕೇಂದ್ರದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಮಾತನಾಡಿ, ಕೇಂದ್ರದ ಜನವಿರೋಧಿ ನೀತಿಯಿಂದಾಗಿ ಗೊಬ್ಬರ, ಗ್ಯಾಸ್ ಇಂಧನ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಈ ಕೂಡಲೇ ಕೇಂದ್ರ ಸರ್ಕಾರ ಬೆಲೆ ಇಳಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸ ಚಂದ್ರಪ್ಪ, ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ ಮಳವಳ್ಳಿ, ಸದ್ದಾಂ ದೊಡ್ಮನೆ, ಶಾಸಕರ ಆಪ್ತ ಸಣ್ಣಕ್ಕಿ ಮಂಜು, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ ಹಾರೋಹಿತ್ತಲು, ಮುಖಂಡರಾದ ಡಿ.ಈ.ಮಧುಸೂದನ್, ಆಶೀಫ್‌ಭಾಷಾ, ಎನ್.ಚಂದ್ರೇಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಸಾಕಮ್ಮ, ಪ್ರಕಾಶಪಾಲೇಕರ್, ಗಣಪತಿ ಗವಟೂರು, ಬಿ.ಎಸ್.ಎನ್.ಎಲ್. ಶ್ರೀಧರ, ನವೀನ್ ಕೆರೆಹಳ್ಳಿ, ಹರ್ಷಕುಮಾರ್, ಉಬೇದುಲ್ಲಾ ಹೊಸನಗರ, ನವೀನ ಹಾರೋಹಿತ್ತಲು, ಖಲೀಲ್ ಷರೀಫ್ ಗಾಳಿಬೈಲು, ಮೋಹಿದ್ದೀನ್ ರಿಪ್ಪನ್‌ಪೇಟೆ, ಪ್ರತಿಭಟನೆಯ ನಂತರ ಉಪತಹಶೀಲ್ದಾರ್ ಗೌತಮ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.




ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.