ಹೊಸನಗರ ; 2025-26ನೇ ಸಾಲಿಗೆ ತೋಟಗಾರಿಕೆ ಇಲಾಖೆ ಹೊಸನಗರ ವತಿಯಿಂದ ತೋಟಗಾರಿಕೆ ಮಿಷನ್ ಮತ್ತು ವಿವಿಧ ಯೋಜನೆಗಳಡಿ ಸಹಾಯಧನದ ಸೌಲಭ್ಯಗಳನ್ನು ಪಡೆಯಲು ಆಸಕ್ತ ಎಲ್ಲಾ ವರ್ಗದ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾವೆಲ್ಲ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು ?
- ಫಸಲು ಆರಂಭವಾಗಿರುವ ಅಡಿಕೆ ತೋಟದಲ್ಲಿ ಕಾಳುಮೆಣಸು ಬೆಳೆ ಬೆಳೆಯಲು ಇಚ್ಚಿಸುವ ರೈತರು.
- 20 HP ಗಿಂತ ಕಡಿಮೆ ಸಾಮರ್ಥ್ಯವಿರುವ ಮಿನಿ ಟ್ರ್ಯಾಕ್ಟರ್ ಖರೀದಿಸಲು.
- ಮುಂದಿನ ದಿನಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಂಡು ಸಹಾಯಧನ ಪಡೆಯಲು.
- ಹನಿ ನೀರಾವರಿ ಘಟಕವನ್ನು ಮುಂದಿನ ದಿನಗಳಲ್ಲಿ ಅಳವಡಿಸಿ ಸಹಾಯಧನವನ್ನು ಪಡೆದುಕೊಳ್ಳಲು.
- ಮಧುವನ ಜೇನು ಸಾಕಾಣಿಕೆ ಯೋಜನೆಯಡಿ ಹೊಸದಾಗಿ ಜೇನು ಪೆಟ್ಟಿಗೆ ಮತ್ತು ಕುಟುಂಬವನ್ನು ಖರೀದಿಸಲು.
- ಅಡಿಕೆ ಬೆಳೆಯಲ್ಲಿ ಎಲೆಚುಕ್ಕೆ ಬಾಧಿತ ತೋಟಗಳಿಗೆ ರೋಗದ ನಿಯಂತ್ರಣಕ್ಕೆ ಔಷಧಿ ಖರೀದಿಸಿ ಬಿಲ್ ಮತ್ತು ದಾಖಲಾತಿಗಳನ್ನು ಸಲ್ಲಿಸಿ ಸಹಾಯಧನ ಪಡೆಯಲು.
- ಹೊಸದಾಗಿ ಖಾಲಿ ಜಾಗದಲ್ಲಿ ತಾಳೆ ಬೆಳೆ ಬೆಳೆಯಲು ಮತ್ತು SMAM ಯೋಜನೆಯಡಿ ಯಂತ್ರೋಪಕರಣಗಳನ್ನು (ಕೊಯ್ಲೋತ್ತರ ನಿರ್ವಹಣೆ) ಮುಂದಿನ ದಿನಗಳಲ್ಲಿ ಖರೀದಿಸಿ ಸಹಾಯಧನ ಪಡೆಯಲು.
ಈ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್, ದಾಖಲಾತಿಗಳು ಕಡ್ಡಾಯವಾಗಿರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾಂಕವಾಗಿರುತ್ತದೆ ಎಂದು ಹೊಸನಗರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಟಿ.ಸಿ. ಪುಟ್ಟನಾಯ್ಕ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.