ಶಿವಮೊಗ್ಗ: ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ದೇಶದ ಅತ್ಯಂತ ಉದ್ದದ ಇನ್‌ಲ್ಯಾಂಡ್ ಕೆಬಲ್ ಸೇತುವೆಯಾದ ಸಿಗಂದೂರು ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸುಮಾರು 2.25 ಕಿಲೋ ಮೀಟರ್ ಉದ್ದದ ಎಕ್ಸ್‌ಟ್ರಾ ಡೋಸ್‌ಡ್ ಬ್ಯಾಲೆನ್ಸ್ ಕ್ಯಾನ್ಟಿಲೀವರ್ ಸೇತುವೆ ಇದಾಗಿದೆ, ಇದರಲ್ಲಿ 740 ಮೀಟರ್ ಉದ್ದದ ಕೇಬಲ್‌ಗಳು ಬಳಸಲಾಗಿದೆ.
ಈ ಮಹತ್ವದ ಯೋಜನೆ ಜನತೆಗೆ ಉತ್ತಮ ಸಂಪರ್ಕವನ್ನು ನೀಡಲಿದೆ ಹಾಗೂ ಭವಿಷ್ಯದಲ್ಲಿ ಪ್ರವಾಸೋದ್ಯಮ ಹಾಗೂ ವ್ಯಾಪಾರಕ್ಕೆ ಹೊಸ ಉಜ್ವಲತೆಯನ್ನು ಒದಗಿಸಲಿದೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಖಾತೆ ಮೂಲಕ ಪ್ರತಿಕ್ರಿಯಿಸಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. “ಇದೊಂದು ವಿಕಸಿತ ಭಾರತದ ದಿಸೆಯಲ್ಲಿ ಪ್ರಮುಖ ಹೆಜ್ಜೆಯಾಗಿದ್ದು, ಈ ಸೇತುವೆ ನಮ್ಮ ಜಿಲ್ಲೆಗೆ ಹೆಮ್ಮೆ ತರಲಿದೆ,” ಎಂದು ಅವರು ಹೇಳಿದ್ದಾರೆ.
ಈ ಸೇತುವೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (MoRTH) ನೇತೃತ್ವದಲ್ಲಿ ಮತ್ತು ಭಾರತ ಸರ್ಕಾರದ ಸಂಪೂರ್ಣ ಸಹಕಾರದಿಂದ ರೂಪುಗೊಂಡ ಮಹತ್ವದ ಯೋಜನೆಯಾಗಿದೆ.
Read More :ಹೊಸನಗರ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.