ತೀರ್ಥಹಳ್ಳಿ ; ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ಇಂದು (ಜೂ.26) ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ತಾಲ್ಲೂಕಿನಾದ್ಯಂತ ಜೂ.26 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.