ಇತ್ತೀಚೆಗೆ ಭಾರತದ ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ತೀರ್ಪಿನಲ್ಲಿ, ಯಾವುದೇ ವ್ಯಕ್ತಿಯು ಕಟ್ಟಡ ನಕ್ಷೆ ಮಂಜೂರಾತಿ ಮತ್ತು ಸ್ವಾಧೀನ ಪ್ರಮಾಣಪತ್ರ (Occupancy Certificate) ಇಲ್ಲದೆ ಮನೆ ನಿರ್ಮಿಸಬಾರದು ಎಂದು ಸೂಚಿಸಲಾಗಿದೆ. ಈ ತೀರ್ಪಿನ ಅನ್ವಯ, ಅಂತಹ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡಲು ಅವಕಾಶವಿಲ್ಲ ಎಂಬುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಈ ತೀರ್ಪಿನ ಬೆನ್ನಲ್ಲೇ, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ರಾಜ್ಯಾದ್ಯಂತ ಅನೇಕ ಮನೆಗಳು ಅನುಮತಿ ಇಲ್ಲದೆ ನಿರ್ಮಾಣಗೊಂಡಿವೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪು ಅನ್ವಯ, ಅನುಮತಿ ಇಲ್ಲದ ಮನೆಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕ ನೀಡುವುದು ಕಾನೂನಾತ್ಮಕವಾಗಿಲ್ಲ. ಜನರು ಯಾವುದೇ ಕಾರಣಕ್ಕೂ ಅನುಮತಿ ಇಲ್ಲದೆ ಮನೆ ಕಟ್ಟಬಾರದು,” ಎಂದು ತೀವ್ರವಾಗಿ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ 2.5 ಲಕ್ಷಕ್ಕೂ ಹೆಚ್ಚು ಮನೆಗಳು ನಕಲಿ ಅಥವಾ ಯಾವುದೇ ಸರಕಾರೀ ಅನುಮತಿಯಿಲ್ಲದೆ ನಿರ್ಮಾಣಗೊಂಡಿದ್ದು, ಈ ಮನೆಗಳಿಗೆ ಸಂಪರ್ಕ ಕಲ್ಪಿಸಲು ಸಲ್ಲಿಸಲಾದ ಅರ್ಜಿಗಳನ್ನು ಸರ್ಕಾರ ಪರಿಶೀಲಿಸುತ್ತಿದೆ. ಸ್ಥಳೀಯ ನಗರಾಭಿವೃದ್ಧಿ ಇಲಾಖೆಗಳು ಮತ್ತು ಪುರಸಭೆಗಳು ಕಟ್ಟಡ ನಕ್ಷೆ ಮಂಜೂರಾತಿ ನೀಡದೆ ಇಂತಹ ಮನೆಗಳಿಗೆ ಅನುಮತಿ ನೀಡಿದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
Read More :ತಾಳಗುಪ್ಪ-ಶಿವಮೊಗ್ಗ-ಮೈಸೂರು ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿ : ಈ ದಿನ ಇರಲ್ಲ ರೈಲು ಸೇವೆ !
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.