ತೀರ್ಥಹಳ್ಳಿ ತಾಲ್ಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ

Written by Mahesha Hindlemane

Published on:

ತೀರ್ಥಹಳ್ಳಿ ; ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜೂ.27) ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ನಿರ್ದೇಶನದಂತೆ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಜೂ.27 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.

Leave a Comment