ಹೊಸನಗರ ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸವೆ ಗ್ರಾಮದ ಶ್ರೀಧರ್ ಎಂಬುವವರ ಅಡಿಕೆ ತೋಟ ಹೊಸನಗರ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಡಿದು ತೋಟವನ್ನು ನಾಶ ಮಾಡಿರುವುದನ್ನು ವಿರೋಧಿಸಿ ಹೊಸನಗರ ತಾಲ್ಲೂಕು ಕಂದಾಯ ಇಲಾಖೆಯ ಎದುರು 3 ದಿನದಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸಾಗರದ ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್ ಮಧ್ಯಸ್ಥಿಕೆಯಲ್ಲಿ ಅಂತ್ಯಗೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಾಗರದ ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಾನು ಇಲ್ಲಿಗೆ ಆಗಮಿಸಿದ್ದು ಇದರ ಸಂಪೂರ್ಣ ತನಿಖೆ ನಡೆಸಲು ಆದೇಶಿಸಲಾಹಿದೆ. ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ತೋಟಗಾರಿಕೆ ಇಲಾಖೆಯ ಸಹಕಾರದಲ್ಲಿ ಅಲ್ಪ ಅವಧಿಯಲ್ಲಿ ಸಂಪೂರ್ಣ ತನಿಖೆ ನಡೆಸುತ್ತೇವೆ ಎಂದು ರೈತ ಮುಖಂಡರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರೈತ ಮುಖಂಡ ತೀ.ನಾ. ಶ್ರೀನಿವಾಸ್, ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಮಾಸ್ತಿಕಟ್ಟೆ ರವೀಂದ್ರ, ಜಯರಾಮ ಶೆಟ್ಟಿ, ಮಂದಾರ ವಿಠಲ, ಮಂದಾರ ಗಿರೀಶ್, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಇದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.