ರಿಪ್ಪನ್ಪೇಟೆ ; ಮಾದಕ ದ್ರವ್ಯಗಳ ಸೇವನೆ ಹೆಚ್ಚುತ್ತಿದ್ದು ಶಾಲಾ-ಕಾಲೇಜಿನ ಮಕ್ಕಳು ಮಾದಕ ದ್ರವ್ಯಗಳಿಂದ ದೂರ ಇದ್ದರೆ ನಿಮ್ಮ ಹಾಗೂ ದೇಶದ ಭವಿಷ್ಯ ಕಟ್ಟಲು ಸಾಧ್ಯ. ಮಾದಕ ವಸ್ತುಗಳ ವ್ಯಸನದ ಅನಿಷ್ಟ ಪಿಡುಗಿನಿಂದ ಯುವ ಜನರನ್ನು ರಕ್ಷಿಸುವ ಗುರುತರ ಹೊಣೆ ಎಲ್ಲರ ಮೇಲಿದೆ ಎಂದು ತೀರ್ಥಹಳ್ಳಿ ಡಿವೈಎಸ್ಪಿ ಆರವಿಂದ್ ಕಲಗುಜ್ಜಿ ಹೇಳಿದರು.
ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಕಾಲೇಜಿನ ಮಕ್ಕಳು ಬೀಡಿ ಸಿಗರೇಟ್ಗಳಂತಹ ದುಶ್ಚಟಗಳಿಗೆ ಬಲಿಯಾದರೆ ಮಾದಕ ದ್ರವ್ಯಗಳ ಮಾರಾಟದ ಏಜೆಂಟರ್ ನಿಮ್ಮನ್ನು ಬಳಸಿಕೊಂಡು ವ್ಯಸನಿಗಳನ್ನಾಗಿ ಮಾಡಿ ನಿಮ್ಮ ಭವಿಷ್ಯವನ್ನು ಹಾಳು ಮಾಡುತ್ತಾರೆ. ಇಂತಹವರ ವಿರುದ್ದ ಪೋಷಕರು ಶಿಕ್ಷಕರು ಮತ್ತು ಪೊಲೀಸ್ ಇಲಾಖೆ ಜಾಗೃತಿ ವಹಿಸಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದು ಕೊಳ್ಳುತ್ತಾನೆ. ಹಾಗೂ ಆರ್ಥಿಕವಾಗಿ ದಿವಾಳಿ ಕೂಡಾ ಅಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಭಾರತದ ಪ್ರತಿಜ್ಞಾವಿಧಿ ಭೋದಿಸಲಾಯಿತು.
ಸರ್ಕಾರಿ ಪದವಿಪೂರ್ವ ಕಾಲೇಜ್ ಪ್ರಾಚಾರ್ಯ ನಜಹತ್ ಉಲ್ಲಾ, ಅಬಕಾರಿ ನಿರೀಕ್ಷಕ ನಾಗರಾಜ್, ಪಿಎಸ್ಐ ರಾಜುರೆಡ್ಡಿ ಬೆನ್ನೂರು, ಉಪನ್ಯಾಸಕಾದ ಹಾಲಪ್ಪ, ಫ್ರಾನ್ಸಿಸ್ ಬೆಂಜಮಿನ್, ಇನ್ನಿತರರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.