Siganduru Bridge Opening Date : ಸಿಗಂದೂರು – ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಐತಿಹಾಸಿಕ ನೂತನ ಸೇತುವೆ ದೇಶದಲ್ಲಿಯೇ ಎರಡನೇ ಉದ್ದದ ಸೇತುವೆ ಎನ್ನುವ ಹೆಗ್ಗಳಿಕೆಯನ್ನು ಗಳಿಸಲಿದೆ. ಇದರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಸೇತುವೆ ಸ್ಥಳಕ್ಕೆ ಕೇಂದ್ರ ಮತ್ತು ರಾಜ್ಯದ ಪ್ರಮುಖ ನಾಯಕರು ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರ ಆಗಮನದ ನಿರೀಕ್ಷೆಯೂ ವ್ಯಕ್ತವಾಗಿದೆ.

ಸಂಸದ ಬಿ. ವೈ. ರಾಘವೇಂದ್ರ, ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ. ವೈ.ವಿಜಯೇಂದ್ರ ಇಂದು ಬೆಳಿಗ್ಗೆ ಈ ಸೇತುವೆಯ ಸ್ಥಳಕ್ಕೆ ಭೇಟಿ ನೀಡಿ ಪೂರ್ವ ತಯಾರಿಗಳನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಭಾಗವಹಿಸಿದ್ದರು.

ಸೇತುವೆ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಉಪಸ್ಥಿತಿಯನ್ನು ಅಪೇಕ್ಷಿಸಿ, ಆಧಿಕೃತ ಆಹ್ವಾನವನ್ನು ನೀಡಿ ಪೂರ್ವಸಿದ್ಧತೆ ನಡೆಯುತ್ತಿದೆ.

ಈ ಸೇತುವೆ ಪೂರ್ಣಗೊಳ್ಳುವುದರಿಂದ ಸಿಗಂದೂರು ಮತ್ತು ಸುತ್ತಮುತ್ತಲ ಗ್ರಾಮಾಂತರ ಪ್ರದೇಶಗಳಿಗೆ ಸುಗಮ ಸಂಚಾರ ವ್ಯವಸ್ಥೆ ಸಾದ್ಯವಾಗಲಿದ್ದು, ವ್ಯಾಪಾರ-ವ್ಯವಹಾರಕ್ಕೂ ಹೊಸ ಜೀವಳ ನೀಡಲಿದೆ. ಸೇತುವೆ ಉದ್ಘಾಟನೆಯ ದಿನಾಂಕ ಅಧಿಕೃತವಾಗಿ ಘೋಷಣೆಯಾಗುವ ನಿರೀಕ್ಷೆಯಿದೆ.

Read More :Karnataka PM-Kisan – ಈ ದಿನ ಕೈ ಸೇರಲಿದೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20ನೇ ಕಂತು !
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.