ರಿಪ್ಪನ್‌ಪೇಟೆ : ಸಾಲಬಾಧೆ ತಾಳಲಾರದೆ ತಂದೆ ವಿಷ ಸೇವಿಸಿ ಆತ್ಮಹ*ತ್ಯೆಗೆ ಪ್ರಯತ್ನಿಸಿದ್ದಾನೆ. ತಂದೆ ವಿಷ ಸೇವಿಸಿದ್ದಕ್ಕೆ ಮನನೊಂದ ಅಪ್ರಾಪ್ತ ಮಗಳೂ ಅದೆ ವಿಷ ಸೇವಿಸಿದ್ದಾಳೆ. ತಂದೆ ಮೃ*ತಪಟ್ಟಿದ್ದು ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲಮನೆ ನಿವಾಸಿ ಕೃಷಿಕ ವೆಂಕಟೇಶ್ (49) ಮೃತ ತಂದೆ. ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಮನೆಯಲ್ಲಿ ಜಗಳವಾಡಿದ್ದಾರೆ ಈ ಸಂದರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನಪಡಿಸಿದ್ದಾರೆ ನಂತರ ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ.
ತಂದೆ ವಿಷ ಕುಡಿದ ವಿಷಯ ತಿಳಿಯುತ್ತಲೇ ಮಗಳು ಅದೇ ಬಾಟಲಿಯಲ್ಲಿ ವಿಷ ಕುಡಿದಿದ್ದಾಳೆ ಕೂಡಲೇ ಇಬ್ಬರನ್ನು ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಿಸದೆ ವೆಂಕಟೇಶ್ ಬುಧವಾರ ರಾತ್ರಿ ಮೃ*ತಪಟ್ಟಿದ್ದಾರೆ. ಅಪ್ರಾಪ್ತ ಮಗಳು ಚೇತರಿಸಿಕೊಂಡಿದ್ದು ಆಸ್ಪತ್ರೆಯಲ್ಲಿದ್ದಾಳೆ.
ಈ ಕುರಿತು ಪುತ್ರ ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.