ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪುತ್ರ ಮತ್ತು ಸೊಸೆಗೆ ಲೋಕಾಯುಕ್ತದಿಂದ ನೋಟಿಸ್

Written by Koushik G K

Published on:

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಶಾಕ್ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ನೋಟಿಸ್‌ಗಳು ಈಶ್ವರಪ್ಪ ಅವರ ಪತ್ನಿ, ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿಗೂ ಬಂದಿವೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಕುರಿತು ಶಿವಮೊಗ್ಗದ ವಕೀಲ ವಿನೋದ್ ಅವರು 2012 ರಲ್ಲೇ ಪ್ರಕರಣ ದಾಖಲಿಸಿದ್ದರು. ಈಶ್ವರಪ್ಪ ಅವರು ಮಂತ್ರಿಯಾಗಿದ್ದ ಸಮಯದಲ್ಲಿ ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಇತ್ತಿಚೆಗೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹೈಕೋರ್ಟ್ 2021ರಲ್ಲಿ ಈ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿ ವಿಚಾರಣೆ ನಡೆಸುವಂತೆ ಸೂಚನೆ ನೀಡಿತ್ತು.

2025ರ ಏಪ್ರಿಲ್ 5ರಂದು ಲೋಕಾಯುಕ್ತ ಠಾಣೆಗೆ FIR ದಾಖಲಿಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲು ನ್ಯಾಯಾಲಯ ಆದೇಶ ನೀಡಿತ್ತು. ಆದಾಗ್ಯೂ, ಮೂರು ತಿಂಗಳು ಕಳೆದ ಬಳಿಕ ಲೋಕಾಯುಕ್ತದಿಂದ ಎಫ್‌ಐಆರ್ ದಾಖಲಿಸಿ ನೋಟಿಸ್ ನೀಡಿದೆ .

Read more :ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ ; ಹೊಸನಗರದ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 13 ಸೆಂ.ಮೀ. ಮಳೆ ದಾಖಲು

Leave a Comment