ಭಾರಿ ಮಳೆಗೆ ಕುಸಿದ ದನದ ಕೊಟ್ಟಿಗೆ ; ವೃದ್ದೆ ಸ್ಥಿತಿ ಗಂಭೀರ

Written by Mahesha Hindlemane

Published on:

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹರತಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಜಾನುವಾರು ಕೊಟ್ಟಗೆ ಕುಸಿದು ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದೆಗೆ ಗಂಭೀರ ಸ್ವರೂಪದ ಗಾಯಗಳಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಂಜವಳ್ಳಿ ಗ್ರಾಮದ ಇಂದಿರಾ ಎಂಬ ವೃದ್ದೆಗೆ ಗಂಭೀರ ಗಾಯಗಳಾಗಿದ್ದು ಎದೆಯ ಪಕ್ಕೆಲುಬು ಮುರಿದಿದೆ ಇದರಿಂದ ಶ್ವಾಸಕೋಶದ ತೊಂದರೆಯಿಂದಾಗಿ ಉಸಿರಾಟದ ಸಮಸ್ಯೆ ಉಂಟಾಗಿ ತಕ್ಷಣ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದ್ದು ವೃದ್ದೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದರೂ ಸ್ಥಿತಿ ಇನ್ನೂ ಗಂಭೀರವಾಗಿದೆ ಎನ್ನಲಾಗಿದೆ.

ಈ ಘಟನೆ ನಡೆದ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿ ನಂತರ ವೃದ್ದೆಯನ್ನು 108 ರ ವಾಹನದಲ್ಲಿ ಶಿವಮೊಗ್ಗಕ್ಕೆ ಕಳುಹಿಸಿರುವುದಾಗಿ ತಿಳಿದುಬಂದಿದೆ.


ಸಕಾಲದಲ್ಲಿ ಚಿಕಿತ್ಸೆ ಸಿಗದೆ ವ್ಯಕ್ತಿ ಸಾ*ವು !

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮದ ನಿವಾಸಿ ರಾಮಪ್ಪ (55) ಲೋ ಬಿ.ಪಿ.ಯಿಂದಾಗಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕದೆ ಸಾ*ವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಮೃತ ರಾಮಪ್ಪಗೆ ಲೋ ಬಿ.ಪಿ.ಕಾಣಿಸಿಕೊಂಡು ತಕ್ಷಣ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಸಾ*ವನ್ನಪ್ಪಿದ್ದು ಇನ್ನೂ ಜೀವ ಇದೆ ಎಂದು ತಿಳಿದು ಸಂಬಂಧಿಕರು ಆಸ್ಪತ್ರೆಗೆ ತಂದರೆ ವೈದ್ಯಾಧಿಕಾರಿಗಳು ಇಲ್ಲದೆ ವ್ಯಕ್ತಿ ಜೀವ ಹೋಗಿದೆ ಎಂದು ದೃಢಪಡಿಸಲು ಸಹ ವೈದ್ಯರು ಯಾರು ಇಲ್ಲವೆಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತಕ್ಷಣ ಇಲ್ಲಿನ 24×7 ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾತ್ರಿ ಪಾಳಿಯ ವೈದ್ಯಾಧಿಕಾರಿಗಳನ್ನು ವರ್ಗಾಯಿಸುವಂತೆ ಸಾರ್ವಜನಿಕರು ಆಗ್ರಹಿಸಿದರು.

ಮೃ*ತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

Leave a Comment