ತೀರ್ಥಹಳ್ಳಿ:ಜುಲೈ 6 ರಂದು ಮಾಜಿ ಜಿಲ್ಲಾ ಸಹಕಾರ ಬ್ಯಾಂಕ್ (DCC Bank) ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರು ತೀರ್ಥಹಳ್ಳಿ ತಾಲೂಕಿನ ಶ್ರೀರಾಮೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಕಾಂಗ್ರೆಸ್ ಪ್ರಮುಖರು, ಸಹಕಾರ ಕ್ಷೇತ್ರದ ನಾಯಕರೂ, ಅಭಿಮಾನಿಗಳು ಹಾಗೂ ಬೆಂಬಲಿಗರು ಗೌಡರೊಂದಿಗೆ ಭಾಗವಹಿಸಿದರು.
ಇದಕ್ಕೂ ಮುನ್ನ, ಜಿಲ್ಲಾ ಸಹಕಾರ ಬ್ಯಾಂಕ್ ನ ನಕಲಿ ಬಂಗಾರದ ಹಗರಣದಲ್ಲಿ ಬಂಧಿತರಾಗಿದ್ದ ಮಂಜುನಾಥ್ ಗೌಡ ಅವರಿಗೆ ಕರ್ನಾಟಕ ಹೈಕೋರ್ಟ್ ಜುಲೈ 2 ರಂದು ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತ್ತು.
ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದರೆ ಪ್ರಗತಿ ಕಾಣಲು ಸಾಧ್ಯವಿಲ್ಲ ; ಆರ್.ಎಂ. ಮಂಜುನಾಥ್ ಗೌಡ