ಹೊಸನಗರ ; ಪ್ರಮುಖ ಸಾಮಾಜಿಕ ಸೇವಾ ಕ್ಷೇತ್ರಗಳಾದ ಆರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರದ ಇಲಾಖೆಗಳಲ್ಲಿ ಕೆಳ ಸ್ತರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ ಬಿಸಿಯೂಟ ಕಾರ್ಮಿಕರು ಕಳೆದ ಹಲವಾರು ದಶಕಗಳಿಂದ ಅತ್ಯಂತ ಕನಿಷ್ಟ ವೇತನದಲ್ಲಿ ಲಕ್ಷಾಂತರ ಮಹಿಳಾ ಕಾರ್ಯಕರ್ತರ ಸೇವೆ ಕಾರ್ಮಿಕ ಹಕ್ಕುಗಳಿಂದ ವಂಚಿತರನ್ನಾಗಿ ಮಾಡಿದ್ದು ರಾಷ್ಟ್ರದ ತಳಮಟ್ಟದಲ್ಲಿ ಸದಾ ಸೇವೆಗೆ ಸಿದ್ದಲಿರುವ ಈ ಮಹಿಳಾ ಕಾರ್ಮಿಕರನ್ನು ಸರ್ಕಾರ ಶಾಸನಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಒದಗಿಸಿ ಕಾಯ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಹೊಸನಗರ ಶಾಖೆಯವರು ಇಂದು ಪಟ್ಟಣದ ಅರಣ್ಯ ಇಲಾಖೆಯಿಂದ ಪ್ರಮುಖ ನಮ್ಮ ಬೇಡಿಕೆಗಳ ಘೋಷಣೆಗಳನ್ನು ಕೂಗುತ್ತಾ ತಾಲೂಕು ದಂಡಾಧಿಕಾರಿಗಳ ಕಚೇರಿಗೆ ತೆರಳಿ ತಹಸೀಲ್ದಾರ್ ರಶ್ಮಿ ಹಾಲೇಶ್ ರಿಗೆ ತಾಲೂಕು ಸಂಘದ ಅಧ್ಯಕ್ಷ ಎಚ್ ಬಿ ಪೂರ್ಣಿಮಾ ಹಾಗೂ ಪದಾಧಿಕಾರಿಗಳ ಮನವಿ ಪತ್ರ ನೀಡಿ ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜುರಿಗೆ ನಮ್ಮ ಬೇಡಿಕೆಗಳ ಮಂಜೂರಾತಿ ಬಗ್ಗೆ ಶಾಸಕರ ಗಮನ ಸೆಳೆಯುವಂತೆ ಮನವಿ ಪತ್ರ ಸಲ್ಲಿಸಿದರು.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/15sfP2wagG/
ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಬಿ ನಾಗರತ್ನ, ಸಹ ಕಾರ್ಯದರ್ಶಿ ಸುಮಾವತಿ, ಸವಿತಾ, ಸುಮ, ಉಮಾ ಪ್ರಸನ್ನ, ಅಂಜಲಿ ಮೈಮುನ್ನಾಬಿ, ಪ್ರಾಪ್ತಿ, ಭಾರತಿ, ಜಯಶ್ರೀ, ನೀಲಮ್ಮ, ಯಶೋಧ ಮೊದಲಾದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.