Thrithahali student gets job in rolls royce ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡು, ಕನ್ನಡತಿಯೋರ್ವಳು ಇದೀಗ ಪ್ರೇರಣೆಯಗಿದ್ದಾಳೆ. ಈ ಮೂಲಕ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ರಿತುಪರ್ಣ ಪಾತ್ರರಾಗಿದ್ದಾರೆ.
ತೀರ್ಥಹಳ್ಳಿ ಮೂಲದ ಮಂಗಳೂರಿನ ನಿವಾಸಿಯಾಗಿರುವ ರಿತುಪರ್ಣ, ಬಾಲ್ಯದಲ್ಲಿ ವೈದ್ಯೆ ಆಗುವ ಕನಸು ಕಂಡಿದ್ದರು. ಆದರೆ ಶಿಕ್ಷಣದ ದಾರಿಯಲ್ಲಿ ಬದಲಾವಣೆ ತಂದುಕೊಂಡು, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ರೊಬೋಟಿಕ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದರು.
ಇನ್ನೋವೇಶನ್ ಸಮ್ಮೇಳನದಲ್ಲಿ ಚಿನ್ನದ ಪದಕ ಗೆದ್ದ ರಿತುಪರ್ಣ, ಈ ಸಾಧನೆಯ ಮೂಲಕ ರೋಲ್ಸ್ ರಾಯ್ಸ್ ಸಂಸ್ಥೆಯಲ್ಲಿ ಇಂಟರ್ನ್‌ಷಿಪ್ ಪಡೆಯುವ ಅವಕಾಶವನ್ನು ಪಡೆದರು. 8 ತಿಂಗಳ ಟಾಸ್ಕ್ ಟೆಸ್ಟ್‌ನಲ್ಲಿ ಅವರ ಪ್ರತಿಭೆ ಮತ್ತು ಕಾರ್ಯಪಟುತನ ಗಮನ ಸೆಳೆದಿದ್ದು, ಕಂಪನಿಯು ನೇರವಾಗಿ ನೇಮಕಾತಿ ಪತ್ರ ನೀಡಿದೆ.
ಪೋಷಕರು ಹಾಗೂ ಕಾಲೇಜಿನ ಪ್ರಾಧ್ಯಾಪಕರು ಅವರ ಈ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದು, ಈಕೆ ಇದೀಗ ಅಮೆರಿಕದ ಶಾಖೆಗೆ ಹೋಗಲು ಸಿದ್ಧರಾಗಿದ್ದಾರೆ. ಮಗಳ ಸಾಧನೆಗೆ ಹೆತ್ತವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ರೋಲ್ಸ್ ರಾಯ್ಸ್ ಕಾರು ಕಂಪನಿಯಲ್ಲಿ ಕೆಲಸ ಗಿಟ್ಟಿಸಿದ ತೀರ್ಥಹಳ್ಳಿ ಮೂಲದ ರಿತುಪರ್ಣ!
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650