ಹೊಸನಗರ : ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಾಧನೆ ಬಗ್ಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ; ಬಿಇಒ ಹೆಚ್.ಆರ್‌. ಕೃಷ್ಣಮೂರ್ತಿ

Written by Mahesha Hindlemane

Published on:

ಹೊಸನಗರ ; ತಾಲ್ಲೂಕಿನ ಸರ್ಕಾರಿ ಹಾಗೂ ಅನುದಾನಿತ ಅನುದಾನ ರಹಿತ ಪ್ರೌಢ ಶಾಲೆ ಮತ್ತು ಕಾಲೇಜ್ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ ಸಾಧನೆ ಕುರಿತು ವಿವಿಧ ಸ್ವರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಅವರು ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನ ಪ್ರೌಢ ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ನಾಲ್ಕು ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಅದರಲ್ಲಿ ಪ್ರಬಂಧ ಸ್ಪರ್ಧೆ, ಆಶುಭಾಷಣ, ಕವನವಾಚನ, ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ವಿದ್ಯಾರ್ಥಿಗಳು ನಾಲ್ಕು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು ಚಿತ್ರಕಲೆಯಲ್ಲಿ ಭಾಗವಹಿಸುವವರು ಕೆಂಪೇಗೌಡರ ಭಾವಚಿತ್ರ ಬಿಡಿಸುವುದು, ಕವನವಾಚನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕೆಂಪೇಗೌಡರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತು ಕವನವಾಚನ, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಬಗ್ಗೆ ಹಾಗೂ ಆಶುಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸ್ಪರ್ಧೆಯ ಸಮಯದಲ್ಲಿ ಆಯ್ಕೆ ಮಾಡಲಾಗುವುದು ಎಂದರು.

ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾ ವಿದ್ಯಾರ್ಥಿಗಳು ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿನಯ್ ಹೆಗಡೆ ಮೊಬೈಲ್ ನಂಬರ್ 9481034584 ಹಾಗೂ ಶಿಕ್ಷಣ ಇಲಾಖೆಯ ಸಂಯೋಜಕಯಾದ ಕರಿಬಸಪ್ಪ ಮೊಬೈಲ್‌ ನಂಬರ್ 9008134256 ರನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ. ಸ್ಪರ್ಧೆಯ ದಿನಾಂಕವನ್ನು ಮುಂದಿನ ದಿನದಲ್ಲಿ ತಿಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರೀವಿಕ್ಷಕ ವಿನಯ್ ಹೆಗಡೆ ಹಾಗೂ ಶಿಕ್ಷಣ ಸಂಯೋಜಕ ಕರಿಬಸಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment