ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ; ಬಿವೈಆರ್

Written by Mahesha Hindlemane

Published on:

ಹೊಸನಗರ ; ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದರೇ ವಿದ್ಯಾರ್ಥಿ-ಪೋಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಂದು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ ಸಾಧ್ಯವೆಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಇಲ್ಲಿನ ಗಾಯತ್ರಿ ಮಂದಿರದಲ್ಲಿ 1ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ ಸ್ವೆಟರ್ ನೀಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಸ್ವೆಟರ್ ವಿತರಿಸಿ ಮಾತನಾಡಿದರು.

2014ರಿಂದ 2025ರವರೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಗಣನೀಯವಾಗಿ ಅಕ್ಷರಸ್ಥರ ಸಂಖ್ಯೆ ಹೆಚ್ಚುತ್ತಿದೆ. 10 ವರ್ಷದ ಈಚೆಗೆ ದೇಶದಲ್ಲಿ ಡಿಜಿಟಲ್ ಯುಗ ಆರಂಭವಾಗಿದೆ ಪ್ರತಿಯೊಬ್ಬರು ಡಿಜಿಟಲ್ ಯುಗಕ್ಕೆ ಬದ್ಧರಾಗಿದ್ದಾರೆ. ದೇಶದಲ್ಲಿ ಸುಮಾರು 43 ಲಕ್ಷ ಟ್ರೈನಿಂಗ್ ಸೆಂಟರ್ ತೆರೆಯಲಾಗಿದೆ. ಹತ್ತು ವರ್ಷಗಳ ಹಿಂದೆ 42 ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರನ್ನು ನೇಮಿಸಲಾಗುತ್ತಿತ್ತು ಆದರೆ ಈಗ 12 ವಿದ್ಯಾಥಿಗಳಿಗೆ ಒಬ್ಬ ಶಿಕ್ಷಕರನ್ನು ನೀಡುತ್ತಿದೆ. ಈ ಹಿಂದೆ ವಿದ್ಯಾರ್ಥಿಗಳಿಗೆ ಮೂಲಭೂತ ಸಮಸ್ಯೆಗಳಿತ್ತು. ಆದರೆ ಈ ವಿದ್ಯಾರ್ಥಿಗಳಿಗೆ ಮೂಲಭೂತ ಸಮಸ್ಯೆಗಳ ಕೊರತೆಯಿಲ್ಲ. ಸರ್ವ ಶಿಕ್ಷಣ ಅಭಿಯಾನದ ಅಡಿಯಲ್ಲಿ ಪ್ರತಿಯೊಬ್ಬರು ವಿದ್ಯಾವಂತರಾಗಿ ಹೊರ ಹೊಮ್ಮುತ್ತಿದ್ದಾರೆ. ಇಂದಿನ ಯುಗದ ಮಕ್ಕಳಿಗೆ ಯಾವುದೇ ಸಮಸ್ಯೆಗಳಿಲ್ಲ. ಆದರೂ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ವರ್ಗದವರಲ್ಲಿ ಕೀಳರಿಮೆ ತೋರುತ್ತಿದ್ದು ಇದನ್ನು ಹೋಗಲಾಡಿಸಬೇಕಾದರೆ ಸರ್ಕಾರಿ ಶಾಲೆಯ ಶಿಕ್ಷಕರು ಆ ಶಾಲೆಯ ಎಸ್‌ಡಿಎಂಸಿ ಸದಸ್ಯರು ಕೊಂಡಿಯಂತೆ ಕೆಲಸ ಮಾಡುವುದರ ಜೊತೆಗೆ ಸರ್ಕಾರಿ ಶಾಲೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ದುಡಿಯಿರಿ ಎಂದರು.

ಈ ಕಾರ್ಯಕ್ರಮದಲ್ಲಿ ಶಾಸಕ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದು ಮಾತನಾಡಿ, ಶಿವಮೊಗ್ಗ ಸಂಸದರು ಜಿಲ್ಲೆಯ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮವಹಿಸಿ ರಸ್ತೆ, ಸೇತುವೆ ರೈಲುಗಳನ್ನು ತಂದಿದ್ದಾರೆ. ಇವರು ತಾವು ಇರುವಿಕೆಯನ್ನು ತೋರಿಸುವುದರ ಜೊತೆಗೆ ಸರ್ಕಾರಿ ಶಾಲೆಯ ಮಕ್ಕಳನ್ನು ಗುರುತಿಸಿ ಸ್ವೆಟರ್ ನೀಡುತ್ತಿದ್ದಾರೆ. ಇವರು ಕ್ರೀಯಶೀಲ ಸಂಸದರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಇವರಿಗೆ ನಾವೆಲ್ಲರೂ ಕೈ ಜೋಡಿಸಿದರೆ ಮುಂದಿನ ದಿನದಲ್ಲಿ ಜಿಲ್ಲೆ ಒಂದು ಮಾದರಿ ಜಿಲ್ಲೆಯನ್ನಾಗಿ ಮಾಡಲಿದ್ದಾರೆ ಎಲ್ಲರೂ ಅವರೊಂದಿಗೆ ಅವರ ಅಭಿವೃದ್ಧಿ ಮಾಡುತ್ತಿರುವ ಕೆಲಸಗಳಿಗೆ ಕೈ ಜೋಡಿಸೋಣ ಎಂದರು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿನಯ್ ಹೆಗಡೆ, ಕೃಷ್ಣವೇಣಿ, ಮಂಡಾನಿ ಮೋಹನ್, ಮತ್ತಿಮನೆ ಸುಬ್ರಹ್ಮಣ್ಯ, ಹಾಲಗದ್ದೆ ಉಮೇಶ್, ಉಮೇಶ್ ಕಂಚುಗಾರ್, ತೀರ್ಥೇಶ್ ಹೆಚ್.ಆರ್, ಎಂ.ಎನ್ ಸುಧಾಕರ್, ಎನ್.ಆರ್ ದೇವಾನಂದ್, ಬಿ ಯುವರಾಜ್, ಶಾಸಕರ ಆಪ್ತ ಕಾರ್ಯದರ್ಶಿ ಬಸವರಾಜ್, ರಾಜೇಶ್, ನೇರಲೆ ರಮೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment