ರಿಪ್ಪನ್‌ಪೇಟೆ ; ರೋಟರಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು. ವಿಶ್ವಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಡಿಸ್ಟ್ರಿಕ್ ಗವರ್ನರ್ ರೊ.ಬಿ.ಎಂ.ಭಟ್ ಹೇಳಿದರು.
ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ವಿಶ್ವಮಾನವ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ 2024-25ನೇ ಸಾಲಿನನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪದವಿ ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣಾರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಅರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ಹೇಳಿದರು.

ಅಸಿಸ್ಟೆಂಟ್ ಗವರ್ನರ್ ಎಂ.ಬಿ.ಲಕ್ಷ್ಮಣಗೌಡ ಮಾತನಾಡಿ, ಎಲ್ಲರಲ್ಲೂ ನಾಯಕತ್ವ ಗುಣಗಳಿರುತ್ತವೆ. ಅದನ್ನು ಗುರುತಿಸುವಂತಹ ಕೆಲಸವಾಗಬೇಕು. ವರ್ಷ ಪೂರ್ತಿ ನಿರಂತರವಾಗಿ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಕಾರ್ಯಗತಗೊಳಿಸುವ ಮೂಲಕ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಮಾದರಿ ರೋಟರಿ ಕ್ಲಬ್ ಅನ್ನಾಗಿ ಬೆಳಸುವ ನಿಟ್ಟಿನಲ್ಲಿ ಸಕ್ರಿಯರಾಗುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ 2024-25ನೇ ಸಾಲಿನನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ., ಪದವಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಎ.ಎಂ.ಕೃಷ್ಣರಾಜು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಝೋನಲ್ ಲೆಪ್ಟಿನೆಂಟ್ ರೊ.ಭರತ್‌ಕುಮಾರ್ ಕೋಡ್ಲು ಕಾರ್ಯದರ್ಶಿ ರೊ. ರವೀಂದ್ರ ಬಲ್ಲಾಳ್ ಕೆ, ರಾಮಚಂದ್ರ, ಸಬಾಸ್ಟಿನ್ ಮಾಥ್ಯೂಸ್ ಇನ್ನಿತರರು ಪಾಲ್ಗೊಂಡಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.