ತೀರ್ಥಹಳ್ಳಿ: ಪ್ರಗತಿಪರ ಚಿಂತಕ, ಬರಹಗಾರ, ಕೃಷಿಕರಾಗಿದ್ದ ಹಾದಿಗಲ್ಲು ರಾಘವೇಂದ್ರ (62) ಅನಾರೋಗ್ಯದಿಂದ ತಾಲೂಕಿನ ಕೋಣಂದೂರು ಸಮೀಪದ ಹಾದಿಗಲ್ಲಿನ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.
ಅಪ್ಪಟ ಸಾಹಿತ್ಯಾಭಿಮಾನಿಯಾಗಿದ್ದ ಇವರು “ತೀರ್ಥಹಳ್ಳಿ ಸುತ್ತಮುತ್ತ” ಎಂಬ ಪುಸ್ತಕದ ಸಂಪಾದಕರಾಗಿದ್ದರು, ಖ್ಯಾತ ಸಾಹಿತಿ ಯು ಆರ್ ಅನಂತಮೂರ್ತಿಯವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಜನಪದದ ಕ್ಷೇತ್ರ, ಹಳೆ ಹಿಂದಿ, ಕನ್ನಡ ಹಾಡುಗಳು ಗಜಲ್ ಗಳ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ತೀರ್ಥಹಳ್ಳಿಯ ರುದ್ರಭೂಮಿಯಲ್ಲಿ ಇವರ ಅಂತ್ಯಸಂಸ್ಕಾರ ನೆರವೇರಿತು.
ಇವರ ನಿಧನಕ್ಕೆ ತೀರ್ಥಹಳ್ಳಿ ಕನ್ನಡ ಸಾಹಿತ್ಯ ಪರಿಷತ್, ಶಾಸಕ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಂತಾಪ ಸೂಚಿಸಿದ್ದಾರೆ.
ಕರ್ತವ್ಯಲೋಪ ಎಸಗಿದ ಬಿಇಒರನ್ನು ಅಮಾನತುಗೊಳಿಸಿ ; ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.