ಸಾಗರ : ಕೆಎಸ್‌ಆರ್ಟಿಸಿ ಬಸ್ ಕ್ಯಾಂಟರ್ ಲಾರಿ ನಡುವೆ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಬಳಿ ಸಂಭವಿಸಿದೆ.
ಕೆಎಸ್‌ಆರ್ಟಿಸಿ ಬಸ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರಿಗೆ ಕೂಡಲೇ ಆನಂದಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ತಿಳಿದು ಬಂದಿದೆ.
ಬಸ್ಸಿನ ಚಾಲಕ ಹಾಗೂ ನಾಲ್ಕೈದು ವಿದ್ಯಾರ್ಥಿಗಳಿಗೆ ತೀವ್ರತರವಾದ ಗಾಯಗಳಾದ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಇನ್ನು, ಅಪಘಾತದಿಂದ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ksrtc bus accident in anandapuram

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.