ಶಿವಮೊಗ್ಗ: ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆ ತಾಳಗುಪ್ಪ-ಯಶವಂತಪುರ ನಡುವಿನ ಮಾರ್ಗದಲ್ಲಿ ಎರಡು ಕಡೆಯಿಂದ ತಲಾ ಎರಡು ಟ್ರಿಪ್ಗಳ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಸಂಚರಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.
- ಯಶವಂತಪುರದಿಂದ ರೈಲು ನಿರ್ಗಮನ:
ಆಗಸ್ಟ್ 1 ಮತ್ತು 8ರಂದು ರಾತ್ರಿ 10:30ಕ್ಕೆ ಹೊರಟು ಬೆಳಿಗ್ಗೆ 4:15ಕ್ಕೆ ತಾಳಗುಪ್ಪ ತಲುಪಲಿದೆ. - ತಾಳಗುಪ್ಪದಿಂದ ರೈಲು ನಿರ್ಗಮನ:
ಆಗಸ್ಟ್ 2 ಮತ್ತು 9ರಂದು ಬೆಳಿಗ್ಗೆ 8:15ಕ್ಕೆ ಹೊರಟು, ಆ ದಿನವೇ ಸಂಜೆ 4:30ಕ್ಕೆ ಯಶವಂತಪುರ ತಲುಪಲಿದೆ. - ನಿಲ್ದಾಣಗಳು:
ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ, ಸಾಗರ ಜಂಬಗಾರು.
ನೈರುತ್ಯ ರೈಲ್ವೆ ಅಧಿಕಾರಿಗಳ ಪ್ರಕಾರ, ಈ ತಾತ್ಕಾಲಿಕ ರೈಲುಗಳ ಸಂಚಾರದಿಂದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.