ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ

Written by Koushik G K

Published on:

ಹೊಸನಗರ: ಹೊಸನಗರದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಬಡಾ ದೋಸ್ತ್ ವಾಹನವು ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಚಾಲಕ ಸ್ಥಳದಲ್ಲೇ ಮೃತಪಟ್ಟುಮತ್ತೊಬ್ಬರು ಗಾಯಗೊಂಡ ದುರ್ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತನನ್ನು ಕುಂದಾಪುರ ತಾಲ್ಲೂಕು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ವಾಹನದ ಕ್ಲೀನರ್ ಪ್ರಭಾಕರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ವಾಹನದ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿದ್ಯುತ್ ಕಂಬವೂ ಕುಸಿದಿದ್ದು, ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿದರು.

ಘಟನೆಯ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Leave a Comment