ಹೊಸನಗರ ; ತಾಲೂಕಿನ ಹೂವಿನಕೋಣೆ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಿದ್ದು, ಹಲವು ಆಯಾಮಗಳಿಂದ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಶನಿವಾರ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್, ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್, ಸಿಪಿಐ ಗುರಣ್ಣ ಎಸ್ ಹೆಬ್ಬಾಳ್, ಪಿಎಸ್‌ಐ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಪೊಲೀಸರ ತಂಡ ಶಾಲೆಗೆ ಭೇಟಿ ನೀಡಿದೆ.
ಶಾಲಾ ಮಕ್ಕಳು, ಪೋಷಕರು, ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮಸ್ಥರ ಹಾಗೂ ಶಾಲಾ ಶಿಕ್ಷಕರ ಬಳಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ. ಇನ್ನು ಎರಡ್ಮೂರು ದಿನಗಳ ಒಳಗಾಗಿ ಆರೋಪಿಗಳನ್ನು ಪತ್ತೆ ಹಚ್ಚುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ತಂಡ ರಚನೆ
ಹೂವಿನಕೋಣಿ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣ ಭೇದಿಸಲು 3 ತಂಡಗಳನ್ನು ಎಸ್ಪಿ ಮಿಥುನ್ ಕುಮಾರ್ ರಚನೆ ಮಾಡಿದ್ದಾರೆ.

ಒಟ್ಟು 18 ಪೊಲೀಸರ ನಿಯೋಜನೆ ಮಾಡಲಾಗಿದೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ತಂಡ ರಚನೆ ಆಗಿದೆ. ತಾಂತ್ರಿಕ ಮಾಹಿತಿ ಕಲೆಹಾಲು ಪೊಲೀಸರು ಮುಂದಾಗಿದ್ದಾರೆ.
ಮೊಬೈಲ್ ಟವರ್ ಡಂಪ್, ಸಿಸಿಟಿವಿ ಪರಿಶೀಲನೆಗೆ 5 ಪೊಲೀಸರ ನಿಯೋಜನೆ ಹಾಗೂ ಹೂವಿನಕೋಣೆ ಗ್ರಾಮದ ಸುತ್ತಮುತ್ತ ದೊರೆಯುವ ಮಾಹಿತಿ ಸಂಗ್ರಹಣೆಗಾಗಿ 8 ಸಿಬ್ಬಂದಿ ನಿಯೋಜನೆ ಹಾಗೂ ಅನುಮಾನಸ್ಪದ ವ್ಯಕ್ತಿಗಳ ವಿಚಾರಣೆಗಾಗಿ 5 ಪೊಲೀಸರ ನಿಯೋಜನೆ ಮಾಡಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.