ಹೊಸನಗರ ; ಕಳೆದ ವರ್ಷ ಮುಂಗಾರು ಆರಂಭಕ್ಕೆ ಮುನ್ನ ತರಾತುರಿಯಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಂದ ಉದ್ಘಾಟನೆಗೊಂಡ ಪಟ್ಟಣಕ್ಕೆ ಸಮೀಪದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಲ್ಲುಹಳ್ಳ ನೂತನ ಸೇತುವೆಯ ಮೇಲ್ಭಾಗದಲ್ಲಿ ರಸ್ತೆ ಇಭ್ಬಾಗವಾಗಿದ್ದು ಸಂಚಾರಕ್ಕೆ ಸಂಚಕಾರಕ್ಕಾಗಿ ಕಾದಂತ್ತಿದೆ.

ರಾಣೆಬೆನ್ನೂರು – ಬೈಂದೂರು ಸಂಪರ್ಕ 766ಸಿ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು ಕಳೆದ ವರ್ಷ ಸುರಿದ ಭಾರೀ ಮಳೆಗೆ ಸೇತುವೆ ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ತಡೆಗೋಡೆ ಧರಾಶಾಯಿ ಆಗಿತ್ತು. ಈ ನಡುವೆ ಸೇತುವೆಯ ಎರಡು ಪಿಲ್ಲರ್ ಗಳ ನಡುವಿನ ಸಂಪರ್ಕಕೊಂಡಿ ಬೇರ್ಪಟ್ಟಿದ್ದು ಶೀಘ್ರದಲ್ಲೇ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು. ತಪ್ಪಿದಲ್ಲಿ ಭಾರೀ ದುರಂತ ಸಂಭವಿಸುವ ಆತಂಕವಿದೆ ಎಂಬ ದೂರು ನಾಗರೀಕರಿಂದ ಕೇಳಿ ಬರುತ್ತಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.