ರಿಪ್ಪನ್ಪೇಟೆ ; ಪಟ್ಟಣದಲ್ಲಿ ಕಳೆದ 5 ದಶಕದಿಂದ ಅಕ್ಕಿ ಹಾಗೂ ಭತ್ತ ವ್ಯಾಪಾರ ನಡೆಸುತ್ತಿದ್ದ ತೀರ್ಥಹಳ್ಳಿ ರಸ್ತೆಯ ನಿವಾಸಿ ಎಸ್. ನಾಗರಾಜ್ ಭಗತ್ (82) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ 1 ಕ್ಕೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.