ನಿಟ್ಟೂರಿನಲ್ಲಿಂದು KUWJ ಹೊಸನಗರ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ

Written by Mahesha Hindlemane

Published on:

ಹೊಸನಗರ ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಹೊಸನಗರ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಇಂದು (ಆ.08) ನಿಟ್ಟೂರಿನಲ್ಲಿ ಆಯೋಜಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಿಟ್ಟೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11:30ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದು, ಹೊಸನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ಬಿದನೂರು ಅಧ್ಯಕ್ಷತೆ ವಹಿಸುವರು.

ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಾ. ಆರ್. ಎಂ ಮಂಜುನಾಥ್ ಗೌಡ ಹಾಗೂ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮವನ್ನು ಶಿಮುಲ್ ಅಧ್ಯಕ್ಷ ಹೆಚ್.ಎನ್ ವಿದ್ಯಾಧರ್ ನೆರವೇರಿಸಲಿದ್ದಾರೆ.

“ಗ್ರಾಮೀಣ ಪತ್ರಿಕೋಧ್ಯಮ” ವಿಷಯದ ಕುರಿತು ನಿಟ್ಟೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ಗಣೇಶ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ ಶಿವಕುಮಾರ್, ಕೆಯುಡ್ಲ್ಯೂಜೆ ರಾಜ್ಯ ಸಮಿತಿ ಸದಸ್ಯ ರವಿಕುಮಾರ್ ಟೆಲೆಕ್ಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ ಅರುಣ್ ಮುಖಂಡರಾದ ಚಿದಂಬರ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಹಾಲಗದ್ದೆ ಉಮೇಶ್, ಕೆ.ವಿ ಕೃಷ್ಣಮೂರ್ತಿ, ನಿಟ್ಟೂರು ಗ್ರಾಪಂ ಸದಸ್ಯರು ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.

ಇನ್ನೂ ಬೆಳಿಗ್ಗೆ 10:30ರಿಂದ ಯಕ್ಷಪಲ್ಲವಿ ಟ್ರಸ್ಟ್ (ರಿ.) ಮಾಳಕೋಡ ಇವರಿಂದ ಯಕ್ಷಮಾಣಿಕ್ಯ ಚಿಂತನ ಹೆಗಡೆ, ಮಾಳಕೋಡ ಇವರ ಗಾನಸಾರಥ್ಯದಲ್ಲಿ ‘ಯಕ್ಷ-ಗಾನ-ನೃತ್ಯ-ವೈಭವ’ ನಡೆಯಲಿದೆ.

Leave a Comment