ಸಾಗರ ; ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಇಂದು ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದ 09 ಜನರು ಜೋಗ ನೋಡಲು ಹೋಗುತ್ತಿದ್ದಾಗ ತಾಳಗುಪ್ಪದಿಂದ ಸಾಗರಕ್ಕೆ ಬರುತ್ತಿದ್ದ ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದ ರಭಸಕ್ಕೆ ಓಮ್ನಿಯಲ್ಲಿದ್ದ ಶೆಟ್ಟಿಕೊಪ್ಪದ ಶೇಖರ್ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಎರಡು ವರ್ಷದ ಮಗು ಸೇರಿದಂತೆ ಉಳಿದ ಏಳು ಜನರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಮತ್ತು ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪಂದನೆ :
ಕಾರ್ಗಲ್ನ ಕಾರ್ಯಕ್ರಮ ಮುಗಿಸಿಕೊಂಡು ಸಾಗರಕ್ಕೆ ಬರುತ್ತಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು ತಮ್ಮ ವಾಹನ ನಿಲ್ಲಿಸಿ ಗಾಯಗೊಂಡವರ ನೆರವಿಗೆ ಬಂದಿದ್ದಾರೆ. ಎಲ್ಲರನ್ನೂ ಸಾಗರ ಆಸ್ಪತ್ರೆಗೆ ಕಳಿಸಿ ಚಿಕಿತ್ಸೆ ಕೊಡಿಸುವ ಜೊತೆಗೆ 08 ಜನರನ್ನು ಆರು ಅಂಬ್ಯುಲೆನ್ಸ್ ಮೂಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.