ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಜಿಲ್ಲಾಧಿಕಾರಿಗಳಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Written by Koushik G K

Published on:

ಚಿಕ್ಕಮಗಳೂರು, ಆಗಸ್ಟ್ 17 :ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವು ತಾಲೂಕುಗಳಲ್ಲಿ ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಬೆಟ್ಟ-ಗಾಡು ಪ್ರದೇಶಗಳಲ್ಲಿ ಭೂ ಕುಸಿತದ ಅಪಾಯ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯನ್ನು ಮನಗಂಡು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ನಾಳೆ (ಆಗಸ್ಟ್ 18) ಒಂದು ದಿನಕ್ಕೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ .

WhatsApp Group Join Now
Telegram Group Join Now
Instagram Group Join Now

ಯಾವ ಶಾಲಾ-ಕಾಲೇಜುಗಳಿಗೆ ರಜೆ?

📢 Stay Updated! Join our WhatsApp Channel Now →

ರಜೆ ಘೋಷಣೆ ಜಿಲ್ಲೆಯ ಕೆಲವು ಭಾಗಗಳಿಗೆ ಮಾತ್ರ ಸೀಮಿತವಾಗಿದ್ದು, ಅವುಗಳು –

  • ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ ಮತ್ತು ಕಳಸ ತಾಲೂಕುಗಳ = ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ

ಮಳೆ ಅಬ್ಬರ – ಆರೆಂಜ್ ಮತ್ತು ರೆಡ್ ಅಲರ್ಟ್

ಹವಾಮಾನ ಇಲಾಖೆ ಈಗಾಗಲೇ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ನದಿ, ತೊರೆ, ಹೊಳೆ, ಜಲಾಶಯಗಳಲ್ಲಿ ನೀರಿನ ಮಟ್ಟವನ್ನು ಅಪಾಯಕರ ಮಟ್ಟಕ್ಕೆ ತಳ್ಳಿದೆ. ಕೆಲವೆಡೆ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮೀಣ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ವಿಶೇಷವಾಗಿ ಮಲೆನಾಡು ಭಾಗದ ಗ್ರಾಮಸ್ಥರು ಸಂಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.

Leave a Comment