ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆ.18) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶ ;
ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು (ಆವತಿ, ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು ಹೋಬಳಿ ವ್ಯಾಪ್ತಿಗಳಿಗೆ ಮಾತ್ರ), ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಮತ್ತು ನರಸಿಂಹರಾಜಪುರ ತಾಲ್ಲೂಕುಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಹಾಗೂ 34ರ ಅಧಿಕಾರದಡಿ ರಜೆ ಘೋಷಿಸಲಾಗಿದೆ.
ಮಳೆ ಅಬ್ಬರಕ್ಕೆ ಕಾರುಗಳು ಜಲಾವೃತ :
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಹಲೆವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಶೃಂಗೇರಿಯಲ್ಲಿ ಭಾರಿ ಮಳೆಯಿಂದ ಕಾರುಗಳು ಜಲಾವೃತಗೊಂಡಿದೆ. ಶೃಂಗೇರಿ ದೇಗುಲದ ಪಾರ್ಕಿಂಗ್ ಇರುವ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ. ತುಂಗಾ ನದಿ ಅಬ್ಬರಕ್ಕೆ ತಗ್ಗು ಪ್ರದೇಶದ ಹಲವು ಗ್ರಾಮಗಳ ಗದ್ದೆ ತೋಟಗಳಿಗೆ ನೀರು ನುಗ್ಗಿದೆ.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.