ಹಳೆ ವೈಷಮ್ಯ ; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

0 4,823

ಭದ್ರಾವತಿ : ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ.

ಸೈಯದ್ ರಜಿಖ್ (30) ಮೃತ ಹತ್ಯೆಗೀಡಾದ ಯುವಕ. ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave A Reply

Your email address will not be published.