ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಈ ಅನುದಾನದ ಚೆಕ್ ಅನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದೇವಸ್ಥಾನ ಸೇವಾ ಸಮಿತಿಯವರಿಗೆ ವಿತರಿಸಿದರು.
ಬಹುದಿನಗಳ ಬೇಡಕೆಯಾಗಿದ್ದ ಇಲ್ಲಿನ ದೇವಸ್ಥಾನದ ಅಭಿವೃದ್ದಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸುವಂತೆ ಮನವಿ ಮಾಡಿಕೊಂಡ ಮೇರೆಗೆ ಶಾಸಕರು ಧಾರ್ಮಿಕ ದತ್ತಿ ಇಲಾಖೆಯಿಂದ 10 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಿಸಿರುವುದಾಗಿ ತಿಳಿಸಿ, ಶನಿವಾರ ಹೊಸನಗರ ತಹಸೀಲ್ದಾರ್ ಕಛೇರಿಯಲ್ಲಿ ದೇವಸ್ಥಾನ ಸಮಿತಿಯವರಿಗೆ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ ಹಾಲೇಶ್, ದೇವಸ್ಥಾನ ಸಮಿತಿಯ ಅಧ್ಯಕ್ಷ ನಾಗರಾಜಗೌಡ, ಹೆದ್ದಾರಿಪುರ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ, ಕಾರ್ಯದರ್ಶಿ ರವಿ, ಖಜಾಂಚಿ ಉಮೇಶ್, ವಿಜಯ, ಸುರೇಶ, ಜಾನಕಣ್ಣ, ನಾಗಭೂಷಣ, ಶಿವಕುಮಾರ್, ಆದರ್ಶ ಮಳವಳ್ಳಿ, ಉಮಾಕರ್, ಇನ್ನಿತರರು ಹಾಜರಿದ್ದು ಶಾಸಕರನ್ನು ಅಭಿನಂದಿಸಿ ಸನ್ಮಾನಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.