ತೀರ್ಥಹಳ್ಳಿ : ಆಗುಂಬೆ ಶಾಲಾ ಬಾಲಕ ಕಾಣೆ !

Written by Koushik G K

Updated on:

ತೀರ್ಥಹಳ್ಳಿ ; ಆಗುಂಬೆಯ ಎವಿಎಂ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಬಿನ್ ವಿಜಯ್ ಎಂಬ 14 ವರ್ಷದ ಬಾಲಕ ಶಾಲೆಯ ಹಾಸ್ಟೆಲ್‌ನಿಂದ ಆ.18 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸು ಬಂದಿರುವುದಿಲ್ಲ.

WhatsApp Group Join Now
Telegram Group Join Now
Instagram Group Join Now

ಕಾಣೆಯಾದವನ ಚಹರೆ :

📢 Stay Updated! Join our WhatsApp Channel Now →

ಈತನ ಎತ್ತರ 4.6 ಅಡಿ, ಸಾಧಾರಣ ಮೈಕಟ್ಟು, ದುಂಡುಮುಖ, ಎಣ್ಣೆಕೆಂಪು ಮೈಬಣ್ಣ ಹೊಂದಿದ್ದು, ಎಡ ಪಕ್ಕೆಯಲ್ಲಿ ಕಪ್ಪು ಮಚ್ಚೆಯಿರುತ್ತದೆ. ಈತ ಕನ್ನಡ ಮತ್ತು ತಮಿಳು ಮಾತಾನಾಡುತ್ತಿದ್ದು, ಹೊರಹೋಗುವಾಗ ಗ್ರೇ ಬಣ್ಣದ ಅರ್ಧ ತೋಳಿನ ಅಂಗಿ, ಜರ್ಕಿನ್, ಬ್ಲೂ ಬಣ್ಣದ ಪ್ಯಾಂಟ್, ಬಿಳಿ ಚಪ್ಪಲಿ, ಆಕಾಶ ನೀಲಿ ಬಣ್ಣದ ಬ್ಯಾಗ್ ಹಾಕಿಕೊಂಡಿರುತ್ತಾರೆ.

ಈ ಬಾಲಕನ ಸುಳಿವು ದೊರೆತಲ್ಲಿ ಶಿವಮೊಗ್ಗ ಎಸ್.ಪಿ ಕಚೇರಿ 08182-261400, ತೀರ್ಥಹಳ್ಳಿ ಡಿವೈಎಸ್‌ಪಿ 08181-220388, ಮಾಳೂರು ಸಿಪಿಐ 9480803333 ಹಾಗೂ ಆಗುಂಬೆ ಪಿಎಸ್‌ಐ 9480803314 ಇವರುಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Comment