23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿ ಪೊಲೀಸರ ಬಲೆಗೆ !

Written by Koushik G K

Published on:

ಹೊಸನಗರ:ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರದ ನಾಸೀರ ಖಾನ್ (52) ಎಂಬುವವರನ್ನು, 23 ವರ್ಷಗಳಿಂದ ವರದಕ್ಷಿಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ, ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

2002ರಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿದ್ದರೂ, ಆರೋಪಿಯು ಆಗಿನಿಂದಲೇ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ.

ಆರೋಪಿಯ ಪತ್ತೆಗೆ ವಿಶೇಷ ತಂತ್ರ ರೂಪಿಸಿದ ಗಂಗೊಳ್ಳಿ ಠಾಣೆಯ ಸಿಬ್ಬಂದಿ ಕೃಷ್ಣ, ಪ್ರಸನ್ನ, ಸಂದೀಪ್ ಕುರಾಣಿ ಹಾಗೂ ಮಹಾಲಿಂಗರಾಯ ಇತ್ತೀಚೆಗೆ ಸಾಗರ ತಾಲೂಕಿನ ಆನಂದಪುರದಲ್ಲಿ ಗುಪ್ತ ಕಾರ್ಯಾಚರಣೆ ನಡೆಸಿ ಅವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ನಂತರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪೊಲೀಸರ ಪ್ರಕಾರ, ನಾಸೀರ ಖಾನ್ ಕಳೆದ ಎರಡು ದಶಕಗಳಿಂದ ವಿವಿಧ ಕಡೆಗಳಲ್ಲಿ ತಲೆಮರೆಸಿಕೊಂಡು ವಾಸಿಸುತ್ತಿದ್ದ.ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರದಲ್ಲಿ ಮರು ಮದುವೆಯಾಗಿ ನೆಲೆಸಿದ್ದ, ಅಂತಿಮವಾಗಿ ನಿಖರ ಮಾಹಿತಿ ಆಧಾರವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಆತ ಕಾನೂನಿನ ಬಲೆಗೆ ಸಿಕ್ಕಿದ್ದಾನೆ.

Leave a Comment