ಭಾರಿ ಮಳೆ ಹಿನ್ನೆಲೆ ; ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Written by Mahesha Hindlemane

Updated on:

ಶಿವಮೊಗ್ಗ ; ಭಾರಿ ಮ‌ಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಆ.28) ರಜೆ ಘೋಷಣೆ ಮಾಡಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ತಾಲೂಕುಗಳ ವ್ಯಾಪ್ತಿಯಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿವಸಗಳಲ್ಲಿ ತರಗತಿಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಆದೇಶದಲ್ಲಿ ತಿಳಿಸಲಾಗಿದೆ.

Leave a Comment