ಶಿವಮೊಗ್ಗ

ಮುಂದುವರೆದ ಭಾರಿ ಮಳೆ ; ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿವಮೊಗ್ಗ ; ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು (ಆ.29ರ ಶುಕ್ರವಾರ) ಸಹ ಹೊಸನಗರ, ಸಾಗರ, ಶಿವಮೊಗ್ಗ, ಸೊರಬ, ಭದ್ರಾವತಿ, ತೀರ್ಥಹಳ್ಳಿ ಮತ್ತು ಶಿಕಾರಿಪುರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ.

ಇಂದು ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಆ. 29 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿವಸಗಳಲ್ಲಿ ತರಗತಿಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಆದೇಶಿಸಲಾಗಿದೆ.

Leave a Comment