ಹೊಸನಗರ ; ಕರ್ನಾಟಕ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳ ಸಹಯೋಗದಿಂದ ಕೊಪ್ಪಳ ಜಿಲ್ಲೆಯ ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡ ಅಧ್ಯಯನ ತಂಡ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿರುವ ನೀರೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯ ಪರಿಸರ,ಕಲಿಕಾ ವಿಧಾನ ಮತ್ತು ಸರ್ಕಾರಿ ಶಾಲೆಯಲ್ಲಿ ಶಾಲಾ ವಾಹನದ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ರತ್ನಾಕರ್ ರವರು ಮಾತನಾಡಿ, ಶಾಲೆಯ ಸರ್ವಾಂಗೀಣ ಪ್ರಗತಿಯಲ್ಲಿ ಪೋಷಕರು ಮತ್ತು ಗ್ರಾಮಸ್ಥರ ಶ್ರಮ ಅಪಾರವಾಗಿದೆ ಎಂದರು, ಸಹ ಶಿಕ್ಷಕರಾದ ಮಂಜುನಾಥ್ ರವರು ಶಾಲೆಯು ರಾಜ್ಯ ಮಟ್ಟದಲ್ಲಿ ಹೆಸರು ಪಡೆಯುವಲ್ಲಿ ಹಿಂದಿನ ಶಿಕ್ಷಕರಾದ ಗಜಾನನ ಹೆಗಡೆಯವರ ದೂರ ದೃಷ್ಟಿಯೇ ಮೂಲ ಕಾರಣ ಎಂದರು.

ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಸುಧಾಕರ್, ಸಮಿತಿಯ ಪದಾಧಿಕಾರಿಗಳು, ಪೋಷಕರು,ಗ್ರಾಮಸ್ಥರು ಶಾಲಾ ಮಕ್ಕಳು, ಮತ್ತಿತರರು ಹಾಜರಿದ್ದರು.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.