ರಿಪ್ಪನ್‌ಪೇಟೆ ; ಇಲ್ಲಿಗೆ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಆಯ್ಕೆಯಾಗಿದ್ದಾರೆ.

ಸೆ.10 ರ ಬುಧವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಿರೀಶ್ ಹೊನ್ನೆಬೈಲು 9 ಮತಗಳನ್ನು ಪಡೆಯುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ನಾಗರಾಜ್ ಪ್ರಕಟಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.